• Slide
    Slide
    Slide
    previous arrow
    next arrow
  • ಕಾರವಾರದಲ್ಲಿ ಭೂಸ್ಪರ್ಶಕ್ಕೆ ಯತ್ನಿಸಿದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್

    300x250 AD

    ಕಾರವಾರ: ಭಾರತೀಯ ಕೋಸ್ಟ್ ಗಾರ್ಡ್ನ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ನಗರದ ಮೂರು ಕಡೆ ಇಳಿಯಲು ಪ್ರಯತ್ನಿಸಿದ್ದು, ಇದು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತು.

    ನಗರದ ಮಾಲಾದೇವಿ ಮೈದಾನ, ಡಿಸಿ ಕಚೇರಿ ಎದುರಿಗಿನ ಫ್ಲೈ ಓವರ್ ಮೇಲೆ, ಟ್ಯಾಗೋರ್ ಕಡಲತೀರದಲ್ಲಿ ಹೆಲಿಕಾಪ್ಟರ್ ಇಳಿಯಲು ಪ್ರಯತ್ನಿಸಿ ತೆರಳಿದೆ. ಹೆಲಿಕಾಪ್ಟರ್ ತೀರಾ ಕೆಳಮಟ್ಟಕ್ಕೆ ಬಂದಿದ್ದನ್ನು ಕಂಡು ಸ್ಥಳೀಯರು ಆತಂಕಿತರಾದರು. ಏನು ನಡೆಯುತ್ತಿದೆ ಎನ್ನುವುದು ತಿಳಿಯದೆ ಗಾಬರಿಯಾದರು. ರಸ್ತೆ, ಕಡಲತೀರದಲ್ಲಿ ನಿಂತವರೆಲ್ಲ ಮೊಬೈಲ್ ಹಿಡಿದು ಫೋಟೋ, ವಿಡಿಯೋ ಮಾಡಿಕೊಂಡರು.

    300x250 AD

    ಆದರೆ ಈ ಬಗ್ಗೆ ಕೋಸ್ಟ್ ಗಾರ್ಡ್ ಅಧಿಕಾರಿಗಳನ್ನ ಸಂಪರ್ಕಿಸಿದಾಗ, ಇದೊಂದು ಟ್ರೈಯಲ್ ಅಷ್ಟೇ. ಗೋವಾದಿಂದ ಬಂದ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ಇದಾಗಿದೆ. ತುರ್ತು ಸಂದರ್ಭದಲ್ಲಿ ಹೆಲಿಕಾಪ್ಟರ್ ಅನ್ನು ಎಲ್ಲೆಲ್ಲಿ ಸುರಕ್ಷಿತವಾಗಿ ಇಳಿಸಬಹುದು ಎಂಬ ಬಗ್ಗೆ ಪರೀಕ್ಷಾರ್ಥ ಪ್ರಯೋಗ ನಡೆಸುತ್ತಿದ್ದೇವೆ. ಅಂಕೋಲಾದ ಹಟ್ಟಿಕೇರಿ, ಕಾರವಾರದ ನಗರ ಭಾಗದಲ್ಲಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top