ದಾಂಡೇಲಿ: ಸರ್ಕಾರದ ಆದೇಶ ಮತ್ತು ಜಿಲ್ಲಾಡಳಿತದ ನಿರ್ದೇಶನದಂತೆ ಅ.28ರಂದು ಕೋಟಿಕಂಠ ಗೀತ ಗಾಯನ ಕಾರ್ಯಕ್ರಮವನ್ನು ತಾಲೂಕಿನ ಹನ್ನೊಂದು ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಜವಾಬ್ದಾರಿ ವಹಿಸಿಕೊಂಡಿರುವ ಆಯಾಯ ಶಾಲೆಯ ಶಿಕ್ಷಕರು ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮದ ನಿರ್ವಹಣೆ ಮಾಡಬೇಕು. ಹಾಗೆಯೇ ನವಂಬರ 1 ರಂದು ನಡೆಯುಲಿರುವ ಕರ್ನಾಟಕ ರಾಜ್ಯೊತ್ಸವವನ್ನು ದಾಂಡೇಲಿ ನಗರಸಭೆ ವಿಜೃಂಭಣೆಯಿಂದ ನೆರವೇರಿಸಲಾಗುವುದು. ಅಂದು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಶಾಲೆಗಳ ಆಡಳಿತ ಮಂಡಳಿಯ ಮುಖ್ಯಸ್ಥರು ತಾವು ರಚಿಸುವ ಟ್ಯಾಬ್ಲೊಗಳ ಕುರಿತು ನಗರಸಭೆಗೆ ಮೋದಲೆ ಮಾಹಿತಿ ನೀಡಬೇಕೆಂದು ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್ ಹೇಳಿದರು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರಸಭೆ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಗರಸಭೆಯ ಉಪಾಧ್ಯಕ್ಷ ಸಂಜಯ ನಂದ್ಯಾಳಕರ ಮಾತನಾಡಿ ಪ್ರತಿಯೊಬ್ಬರು ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಲ್ಲದೇ ಕರ್ನಾಟಕ ರಾಜ್ಯೋತ್ಸವ ಆಚರಣೆಯಲ್ಲಿಯು ಪಾಲ್ಗೊಳ್ಳಬೇಕೆಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಸರಸ್ವತಿ ರಜಪೂತ ಅಧ್ಯಕ್ಷತೆ ವಹಸಿದ್ದರು. ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಮೌಲಾಲಿ ಮುಲ್ಲಾ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ, ಡಿವೈಎಸ್ಪಿ ಕೆ.ಎಲ್. ಗಣೇಶ, ಸಿಪಿಐ ಬಿ.ಎಸ್. ಲೋಕಾಪುರ ತಹಶೀಲ್ದಾರ ಕಾರ್ಯಾಲಯದ ಶಿರಸ್ತೆದಾರುಗಳಾದ ಗೋಪಿ ಚವ್ಹಾಣ ಮತ್ತು ರಾಘವೇಂದ್ರ, ನಗರಸಭೆ ಅಧಿಕಾರಿ ಬಾಳು ಗವಾಸ ಇದ್ದರು. ಸಭೆಯಲ್ಲಿ ನಗರಸಭಾ ಸದಸ್ಯರು, ಸಿಬ್ಬಂದಿಗಳು, ಶಿಕ್ಷಕರು, ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.