ಕಾರವಾರ: ಜಿಲ್ಲೆಯ ಮಾಜಾಳಿ, ದೇವಳಮಕ್ಕಿ, ಬಾಡ, ಕಾಲಭಾಗ, ಪಾಳಾ ಮತ್ತು ಕಾತೇಲಿ ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿ ಚುನಾವಣೆಯ ನಿಮಿತ್ತ ಅ.28ರಂದು ಮತದಾನ ಜರುಗಲಿದ್ದು, 26ರಂದು ಸಂಜೆ 5 ಗಂಟೆಯಿAದ 28ರ ಸಂಜೆ 4 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ.
ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳ ಮಾಲೀಕರು, ಅಧಿಭೋಗದಾರರು ಮತ್ತು ವ್ಯವಸ್ಥಾಪಕರು ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಅದರ ಕೈಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸಬೇಕು ಹಾಗೂ ಸಾರ್ವಜನಿಕರು ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು.
ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಸಾರ್ವಜನಿಕ ಉಪದ್ರವ, ಬೀದಿ ರಂಪಾಟ ಮಾಡುತ್ತಿರುವುದು ಕಂಡುಬಂದರೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆ ಮುಕ್ತಾಯವಾಗುವವರೆಗೆ ಅವರನ್ನು ಕಸ್ಟಡಿಯಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.