Slide
Slide
Slide
previous arrow
next arrow

ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿಯಿಂದ ಜನಜಾಗೃತಿ

300x250 AD

ಭಟ್ಕಳ: ದೇಶದ ಜನತೆ ಎದುರಿಸುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಯುವಜನತೆಯ ನಿರುದ್ಯೋಗದಂತಹ ಸಮಸ್ಯೆಗಳ ಪರಿಹಾರಕ್ಕಾಗಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದೇಶಾದ್ಯಂತ ಹಕ್ಕೊತ್ತಾಯದ ಅಭಿಯಾನವನ್ನು ಹಮ್ಮಿಕೊಂಡಿದ್ದು, ಕಲ್ಬುರ್ಗಿಯಿಂದ ಆರಂಭಗೊಂಡ ಜನಜಾಗೃತಿ ಜಾಥಾ ಇತ್ತೀಚಿಗೆ ಪಟ್ಟಣ ತಲುಪಿತು.

ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಬಿಕಟ್ಟು ನಿಭಾಯಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ತಕ್ಷಣ ಪರಿಹಾರ ಕ್ರಮಗಳು ತೆಗೆದುಕೊಳ್ಳಬೇಕು. ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ (ಸ್ಟೈಪೆಂಡ್) ನೀಡಬೇಕು. ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ ಜೀವನೋಪಾಯದ ಹಕ್ಕನ್ನು ಮೂಲಭೂತ ಹಕ್ಕನಾಗಿ ಮಾಡಬೇಕು. ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯಬೇಕು. ಬಡವರಿಗೆ ಅವರ ಖರೀದಿ ಸಾಮರ್ಥ್ಯವನ್ನು ಸಕ್ರಿಯಗೊಳಿಸಲು ಹಣ ನೀಡಬೇಕು. ಎಲ್ಲಾ ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ಉಚಿತ ಸಿಲಿಂಡರ್ ಮತ್ತು ಸಬ್ಸಿಡಿ ರಿಫಿಲ್ ಸಿಲಿಂಡರ್ ಗಳು ನೀಡಬೇಕು ಎಂಬ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ಕಲಬುರ್ಗಿಯಿಂದ ಮಂಗಳೂರು ತನಕ ಜಾಥಾ ನಡೆಸಲಾಗುತ್ತಿದೆ.

ಜಾಥಾವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್, ಇಂದು ನಮ್ಮ ದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದೂರಿವೆ. ಅದರಲ್ಲಿ ಬಹುಮುಖ್ಯವಾಗಿ ಬೆಲೆ ಏರಿಕೆ ಮತ್ತು ನಿರುದ್ಯೋಗವಾಗಿದೆ. ಇದರಿಂದ ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ಚಿಂತಾಜನಕವಾಗಿದೆ. ಬಡಜನರು ಬಳಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ, ಆದಾಯ ಪಾತಾಳಕ್ಕೆ ಕುಸಿದಿದೆ ಎಂದರು.

300x250 AD

ಜನಸಾಮಾನ್ಯರ ಈ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಅಕ್ಟೋಬರ್ 15ರಿಂದ 31ರ ತನಕ ಒಂದು ರಾಷ್ಟೀಯ ಅಭಿಯಾನ ಹಮ್ಮಿಕೊಂಡಿದೆ. ‘ದೇಶದೆಲ್ಲೆಡೆ ಹಾಹಾಕಾರ- ನಿರುದ್ಯೋಗ ಮತ್ತು ಬೆಲೆ ಏರಿಕೆಗೆ ಎಂದು ಪರಿಹಾರ…?’ ಎಂಬ ಘೋಷವಾಕ್ಯದೊಂದಿಗೆ ನಡೆಯುವ ಈ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಿ ಸರಕಾರಕ್ಕೆ ಜನರು ಎದುರಿಸುತ್ತಿರುವ ಸಂಕಷ್ಟದ ಸ್ಥಿತಿಯನ್ನು ಮನದಟ್ಟು ಮಾಡುವ ಒಂದು ಪ್ರಯತ್ನವಾಗಿದೆ. ಈ ಅಭಿಯಾನದ ಅಂಗವಾಗಿ ಜನ ಜಾಗೃತಿ ಜಾಥಾವು ಕಲಬುರಗಿಯಿಂದ ಮಂಗಳೂರಿನವರೆಗೆ ಸಂಚರಿಸುತ್ತಿದ್ದು, ಬೈಕ್ ರ‍್ಯಾಲಿ, ಸಾರ್ವಜನಿಕ ಸಭೆ, ಪತ್ರಿಕಾಘೋಷ್ಠಿ, ಬೀದಿ ನಾಟಕ ಮುಂತಾದ ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಶ್ರೀಕಾಂತ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ, ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಝೀಝ್ ಜಾಗರ‍್ದಾರ್, ಜಿಲ್ಲಾಧ್ಯಕ್ಷ ಫಾರೂಖ್ ಮಾಸ್ಟರ್, ಖಮರುದ್ದೀನ್ ಮಷಾಯಿಖ್, ಮುಖಂಡರಾದ ಅಬ್ದುಲ್ ಜಬ್ಬಾರ್ ಅಸದಿ, ಅಬ್ದುಲ್ ಮಾಜೀದ್ ಕೋಲಾ ಮುಂತಾದವರು ಇದ್ದರು.

Share This
300x250 AD
300x250 AD
300x250 AD
Back to top