Slide
Slide
Slide
previous arrow
next arrow

ಕ್ಷೇತ್ರದಲ್ಲಿ ಗರಿಗೆದರಿದ ರಾಜಕೀಯ

300x250 AD


ಮಾಜಿ ಶಾಸಕ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರ್ಪಡೆಯ ವಿಚಾರ ಕ್ಷೇತ್ರದಲ್ಲಿ ಹರಿದಾಡುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕ್ಷೇತ್ರದಲ್ಲಿ ಈ ಬಾರಿ ತನ್ನ ಪ್ರಬಲ ಎದುರಾಳಿಯಾಗಿದ್ದ ಪಾಟೀಲ್ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿಯುತ್ತಿರುವುದರಿಂದ ಹಾಲಿ ಸಚಿವ ಶಿವರಾಮ್ ಹೆಬ್ಬಾರ್ ಅವರಿಗೆ ಸ್ವಲ್ಪ ತಲೆ ಬಿಸಿ ಹೆಚ್ಚಾಗಿದೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಮುಂಡಗೋಡ, ಬನವಾಸಿ ಭಾಗದಲ್ಲಿ ಹೆಬ್ಬಾರ್ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು ಕಾಂಗ್ರೆಸ್ ನಾಯಕರನ್ನ ತನ್ನತ್ತ ಸೆಳೆಯುವ ಕಾರ್ಯಕ್ಕೆ ಇಳಿದಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಪಾಟೀಲ್ ಕಾಂಗ್ರೆಸ್ ಸೇರುತ್ತಿದ್ದಂತೆ ಹೆಬ್ಬಾರ್ ಗೆ ಟಾಂಗ್ ಕೊಡಲು ಬಿಜೆಪಿಯ ದೊಡ್ಡ ಮಟ್ಟದ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗಿದ್ದು ಚುನಾವಣೆಯಲ್ಲಿ ಈ ಬಾರಿ ಜಿದ್ದಾಜಿದ್ದಿನ ಪೈಪೋಟಿ ನಡೆಯುವುದರಲ್ಲಿ ಅನುಮಾನವಿಲ್ಲ ಎನ್ನಲಾಗಿದೆ.

300x250 AD
Share This
300x250 AD
300x250 AD
300x250 AD
Back to top