ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವುದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಇದು ಬಿಜೆಪಿಯವರ ಕಣ್ಣೊರೆಸುವ ತಂತ್ರವಷ್ಟೇ ಎಂದು ಟೀಕಿಸಿದ್ದಾರೆ.
ನ್ಯಾ.ನಾಗಮೋಹನ ದಾಸ್ ವರದಿ ಸಲ್ಲಿಕೆಯಾಗಿ ಎಷ್ಟು ವರ್ಷ ಆಗಿದೆ? ಇಷ್ಟು ವರ್ಷವಾದರೂ ಯಾಕೆ ವರದಿ ಅನುಷ್ಠಾನಕ್ಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಇವಾಗ ಯಾಕೆ ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿದ್ದಾರೆ. ಇದರ ಬದಲು ಅಧಿವೇಶನ ಕರೆದು ಬಿಲ್ ಪಾಸ್ ಮಾಡಬೇಕಿತ್ತು. ವರದಿಗೆ ಜಾರಿಗೊಳಿಸಬೇಕೆಂದು ಮೂರ್ನಾಲ್ಕು ಬಾರಿ ಸದನದಲ್ಲಿ ಒತ್ತಾಯಿಸಿದ್ದೆವು. ಮೀಸಲಾತಿ ಹೆಚ್ಚಳದ ಬಗ್ಗೆ 9ನೇ ಶೆಡ್ಯೂಲ್ ಗೆ ಸೇರಿಸಬೇಕಲ್ಲವೇ? ಬಿಜೆಪಿಯವರು ಯಾವತ್ತೂ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.