Slide
Slide
Slide
previous arrow
next arrow

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರಕ್ಕೆ

300x250 AD

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ವಹಿಸಿಕೊಂಡರು .

ಗಾಂಧಿ ಕುಟುಂಬ ಸ್ಪರ್ಧೆಯಿಂದ ಹೊರಗುಳಿದ ನಂತರ ಗ್ರ‍್ಯಾಂಡ್ ಓಲ್ಡ್ ಪಕ್ಷದ ಉನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಅವರ ವಿರುದ್ಧ ಖರ್ಗೆ ಗೆಲುವು ಸಾಧಿಸಿದ್ದರು.ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಔಪಚಾರಿಕವಾಗಿ ಚುನಾವಣಾ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಿ , ನಂತರ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಿದರು . ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು .

300x250 AD

Share This
300x250 AD
300x250 AD
300x250 AD
Back to top