Slide
Slide
Slide
previous arrow
next arrow

ಹೊಂಡಮಯ ರಾಷ್ಟ್ರೀಯ ಹೆದ್ದಾರಿ; ಅಪಘಾತಗಳಿಗೆ ರಹದಾರಿ

300x250 AD

ಜೊಯಿಡಾ: ತಾಲೂಕಿನ ರಾಮನಗರ- ಗೋವಾ ರಾಷ್ಟ್ರೀಯ ಹೆದ್ದಾರಿ ಅಕ್ಷರಶಃ ಮೃತ್ಯು ಕೂಪವಾಗಿದೆ. ದಿನೇ ದಿನೇ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ತಿನೈಘಾಟದಿಂದ- ಅನಮೋಡವರೆಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ.
ಕಳೆದ ನಾಲ್ಕು ವರ್ಷಗಳ ಹಿಂದೆಯೇ ಪ್ರಾರಂಭವಾದ ಕಾಮಗಾರಿ ಈವರೆಗೆ ಮುಗಿಯದ ಕಾರಣ ವಾಹನ ಸವಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ತಾಲೂಕಾ ಆಡಳಿತ, ಜಿಲ್ಲಾಡಳಿತ, ಶಾಸಕರು, ಜನಪ್ರತಿನಿಧಿಗಳು ತಿಳಿದು ತಿಳಿಯದ ಹಾಗೆ ಇರುವುದು ಬೇಸರದ ಸಂಗತಿಯಾಗಿದೆ. ತಿನೈಘಾಟದಿಂದ ಅನಮೋಡವರೆಗೆ ಅಲ್ಲಲ್ಲಿ ರಸ್ತೆ ಮಾಡದೆ ಬಿಡಲಾಗಿದ್ದು, ದಿನವೂ ಸಾವಿರಾರು ವಾಹನಗಳು ಇದೇ ರಸ್ತೆಯಲ್ಲಿ ತಿರುಗಾಡುವುದರಿಂದ ದೊಡ್ಡ ದೊಡ್ಡ ಹೊಂಡಗಳು ಬಿದ್ದಿವೆ. ಮಳೆಗಾಲವಾದ್ದರಿಂದ ಹೊಂಡದಲ್ಲಿ ನೀರು ತುಂಬಿ ವಾಹನಗಳು ಸಾಗುವಾಗ ಹೊಂಡಗಳು ಕಾಣದೇ ಬಹಳಷ್ಟು ವಾಹನಗಳು ಹೊಂಡದಲ್ಲಿ ಬಿದ್ದು ಅಪಘಾತಗಳು ಸಂಭವಿಸಿವೆ.
ಸ್ಥಳೀಯರ ಪ್ರತಿಭಟನೆ: ರಾಮನಗರ ಭಾಗದ ಜನರು ಕೂಡಲೇ ರಸ್ತೆ ಸರಿಪಡಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿ ಪ್ರತಿಭಟನೆಯನ್ನು ನಡೆಸಿದ್ದಾರೆ. ದಿನವೂ ಬಹಳಷ್ಟು ವಾಹನಗಳು ಹೊಂಡಗಳನ್ನು ತಪ್ಪಿಸಲು ಹೋಗಿ ಆಯ ತಪ್ಪಿ ಅಪಘಾತಗಳು ಸಂಭವಿಸುತ್ತಿವೆ. ಎಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸ್ಥಿತಿಯೇ ಈ ರೀತಿಯಾದರೆ ಇನ್ನುಳಿದ ರಸ್ತೆಗಳ ಗತಿಯೇನು? ಪಕ್ಕದ ಗೋವಾ ರಾಜ್ಯದ ರಸ್ತೆಗಳನ್ನು ನೋಡಿ ಇಲ್ಲಿನ ಅಧಿಕಾರಿಗಳು, ಜನಪ್ರತಿನಿಧಿಗಳು ಕೆಲಸ ಮಾಡಬೇಕಿದೆ ಎಂದು ಜನರು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
ಗೋವಾ- ಅನಮೋಡ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಭಾರವಾದ ವಾಹನಗಳಿಗೆ ಈ ರಸ್ತೆಯಲ್ಲಿ ಅವಕಾಶ ನೀಡುತ್ತಿಲ್ಲ. ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ಇನ್ನೂ ಹಲವು ಕಡೆಗಳಿಂದ ಬರುವ ವಾಹನ ಸವಾರರು ರಸ್ತೆ ಸರಿಯಿಲ್ಲದ ಕಾರಣ ಕಾರವಾರ ಮೂಲಕ ಗೋವಾಕ್ಕೆ ಸಾಗುತ್ತಿದ್ದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಇಲ್ಲಿನ ಸ್ಥಳೀಯ ಜನರು ಮತ್ತು ಗೋವಾಕ್ಕೆ ಸಾಗುವ ಪ್ರವಾಸಿಗರು ರಸ್ತೆ ಸರಿಯಿಲ್ಲದ ಕಾರಣ ಸಮಸ್ಯೆ ಎದುರಿಸುವಂತಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಹಾಗೂ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು ಗಮನ ಹರಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕಿದೆ.

ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಅಪಘಾತಗಳು ಹೆಚ್ಚಿವೆ. ಸ್ಥಳೀಯ ಶಾಸಕರು ಗಮನ ಹರಿಸಿ ಕೂಡಲೇ ಕೆಲಸ ಪೂರ್ಣಗೊಳ್ಳುವಂತೆ ಸರ್ಕಾರದ ಗಮನಕ್ಕೆ ತರಬೇಕಾಗಿದೆ. ಗುರಪ್ಪ ಹಣಬರ, ಅಖೇತಿ ಗ್ರಾ.ಪಂ. ಸದಸ್ಯರು

300x250 AD
Share This
300x250 AD
300x250 AD
300x250 AD
Back to top