Slide
Slide
Slide
previous arrow
next arrow

ಮಹಾರಾಷ್ಟ್ರದಲ್ಲಿ ಕೋವಿಡ್ ರೂಪಾಂತರ ತಳಿ ಪತ್ತೆ: :ಮುಂಜಾಗ್ರತಾ ಮಾರ್ಗಸೂಚಿ ಪ್ರಕಟ

300x250 AD

ಕಾರವಾರ: ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ಮತ್ತೆ ಕೊರೋನಾ ದೇಶಕ್ಕೆ ಕಾಲಿಡುವುದಿಲ್ಲ ಎನ್ನುವ ವಿಶ್ವಾಸದಲ್ಲಿ ಜನರು ಇದ್ದಾರೆ. ಇದರ ನಡುವೆ ಒಮಿಕ್ರಾನ್ ಹೊಸ ಉಪ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಆತಂಕ ಸೃಷ್ಟಿ ಮಾಡಿದ್ದು, ಹೀಗಾಗಿ ರಾಜ್ಯದಲ್ಲಿ ದೀಪಾವಳಿ ಹಬ್ಬ ಹಾಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ದೇಶಕ್ಕೆ ಕಾಲಿಟ್ಟಿದ್ದ ಕೊರೋನಾದಿಂದ ಸಾಕಷ್ಟು ಸಾವು- ನೋವುಗಳು ಸಂಭವಿಸಿತ್ತು. ಅದರಲ್ಲೂ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಹೇರಿದ ಲಾಕ್ ಡೌನ್‌ನಿಂದ ಆರ್ಥಿಕ ವ್ಯವಸ್ಥೆಯೇ ತಲೆಕೆಳಗೆ ಆಗಿತ್ತು. ಮತ್ತೆ ಕೊರೋನಾ ಮೂರನೇ ಅಲೆ ತಾಂಡವಾಡುತ್ತದೆ ಎಂದು ತಜ್ಞರು ಹೇಳಿದರು, ಮೂರನೇ ಅಲೆ ಅಷ್ಟೇನು ಪರಿಣಾಮ ಬೀರಿರಲಿಲ್ಲ. ಆದರೆ ಸದ್ಯ ಮಹಾರಾಷ್ಟ್ರದಲ್ಲಿ ಓಮಿಕ್ರೋನ್ ರೂಪಾಂತರಿ ತಳಿ ಪತ್ತೆಯಾಗಿದ್ದು ಸದ್ದಿಲ್ಲದೇ ಸೋಂಕಿತರ ಸಂಖ್ಯೆ ಸಹ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂಜಾಗೃತ ಕ್ರಮವನ್ನ ಕೈಗೊಂಡಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಕಿರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ, ಸರ್ಕಾರ ಪ್ರಕಟಿಸಿದ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.
ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗುವಂತೆ ಮಾರ್ಗಸೂಚಿಯಲ್ಲಿ ತಿಳಿಸಿದೆ. ಕೋವಿಡ್ ಪರೀಕ್ಷೆಗೆ ಒಳಗಾದವರು ಕಡ್ಡಾಯವಾಗಿ ಪ್ರತ್ಯೇಕವಾಗಿ ಮನೆಯಲ್ಲಿ ಸ್ವಯಂ ಪ್ರೇರಿತವಾಗಿ ಇರುವಂತೆ ಸೂಚಿಸಿದೆ. ಅಲ್ಲದೇ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಶೀಘ್ರವಾಗಿ ಹತ್ತಿರದ ಆಸ್ಪತ್ರೆಗೆ ತೆರಳಿ, ವೈದ್ಯಕೀಯ ಆರೈಕೆಯನ್ನು ಪಡೆಯುವಂತೆ ತಿಳಿಸಿದೆ.
ಏರ್ ಕಂಡೀಷನ್ ವ್ಯವಸ್ಥೆ ಇರುವ ಒಳಾಂಗಣಗಳು, ಅಗತ್ಯ ಗಾಳಿ ಬೆಳಕಿಲ್ಲದಿರುವ ಸ್ಥಳಗಳು, ಮುಚ್ಚಿದ ಸಂರಕ್ಷಣೆಯ ಜನಸಂದಣಿಯ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದ್ದು, ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣದಲ್ಲಿ ಆಚರಿಸುವುದು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರುವಂತೆ ತಿಳಿಸಿದೆ.
ಇನ್ನು ಕೋವಿಡ್19 ಲಸಿಕೆಯ ಬೂಸ್ಟರ್, ಮುಂಜಾಗ್ರತಾ ಡೋಸ್ ಲಸಿಕೆ ಬಾಕಿ ಇರುವವರು ಕೂಡಲೇ ತೆಗೆದುಕೊಳ್ಳುವಂತೆ ತಿಳಿಸಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸುವಂತೆ ಸೂಚಿಸಿದೆ. ಇದಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು ಹಾಗೂ ಉಗುಳುವುದಿರುವುದು, ಕೈಗಳನ್ನು ಸೋಪ್ ಹಾಗೂ ನೀರಿನಿಂದ ತೊಳೆಯವುದು. ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವಂತೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಓಮಿಕ್ರಾನ್ ಸ್ಪಾನ್ ಎಂದು ಕರೆಯಲ್ಪಡುವ ಬಿಎಫ್7 ಉಪ ತಳಿ ಹೆಚ್ಚಿನ ಪ್ರಸರಣವನ್ನು ಹೊಂದಿದೆ ಮತ್ತು ಲಸಿಕೆ ಪ್ರತಿರಕ್ಷೆಯನ್ನು ಮೀರಿ ಹೋಗುವ ಸಾಧ್ಯತೆ ಇದೆ. ಈ ಹೊಸ ರೂಪಾಂತರಿ ಹಿಂದಿನ ರೂಪಾಂತರದೊಂದಿಗೆ ನೈಸರ್ಗಿಕ ಸೋಂಕಿನ ಮೂಲಕ ಅಥವಾ ಲಸಿಕೆಗಳ ಸಂಪೂರ್ಣ ಕೋರ್ಸ್ ತೆಗೆದುಕೊಂಡರೂ ಸಹ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ಕೇರ್ ಹಾಸ್ಪಿಟಲ್ಸ್ ಗ್ರೂಪ್‌ನ ಆಂತರಿಕ ವೈದ್ಯಕೀಯ ಸಲಹೆಗಾರ ನವೋದಯ ಗಿಲ್ಲಾ ಹೇಳಿದರು .

300x250 AD
Share This
300x250 AD
300x250 AD
300x250 AD
Back to top