ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜನರ ಮೇಲೆ ದೌರ್ಜನ್ಯ ಎಸಗಲಾಗುತ್ತಿದ್ದು, ಅದರ ಪರಿಣಾಮಗಳನ್ನು ಪಾಕಿಸ್ಥಾನ ಅನುಭವಿಸಬೇಕಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಶೌರ್ಯ ದಿವಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಭಾರತೀಯ ಸೇನೆಯ ಪದಾತಿ ದಳದ ದಿನಾಚರಣೆಯ ಅಂಗವಾಗಿ ಶೌರ್ಯ ದಿವಸ್ ಆಯೋಜಿಸಲಾಗಿದೆ.
ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವ ಬಗ್ಗೆ ಸುಳಿವು ನೀಡಿದ ಸಚಿವರು, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಅವಳಿ ಕೇಂದ್ರಾಡಳಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಯ ಗುರಿಯನ್ನು ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ತಲುಪಿದ ನಂತರ ಸಂಪೂರ್ಣ ಸಾಧಿಸಲಾಗಿದೆ ಎಂದು ಪರಿಗಣಿಸಲಾಗುವುದು. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ನಾವು ಈಗಷ್ಟೇ ಅಭಿವೃದ್ಧಿಯ ಪಯಣವನ್ನು ಪ್ರಾರಂಭಿಸಿದ್ದೇವೆ ಎಂದಿದ್ದಾರೆ.
”ನಾವು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ನಮ್ಮ ಅಭಿವೃದ್ಧಿಯ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ನಾವು ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ತಲುಪಿದಾಗ ನಾವು ನಮ್ಮ ಗುರಿಯನ್ನು ಸಾಧಿಸಿದಂತಾಗುತ್ತದೆ” ಎಂದು ಸಿಂಗ್ ಅವರು ‘ಶೌರ್ಯ ದಿವಸ್’ ಕಾರ್ಯಕ್ರಮವನ್ನು ಉದ್ದೇಶಿಸಿ ಹೇಳಿದರು.
”ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಭಯೋತ್ಪಾದಕರ ಏಕೈಕ ಗುರಿ ಭಾರತವನ್ನು ಗುರಿಯಾಗಿಸುವುದು” ಎಂದರು.
2019 ರ ಆಗಸ್ಟ್ 5 ರಂದು ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಜನರ ವಿರುದ್ಧದ ತಾರತಮ್ಯವನ್ನು ಕೊನೆಗೊಳಿಸಿತು ಎಂದು ಸಿಂಗ್ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಜನರ ಮೇಲಿನ ತಾರತಮ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆಗಸ್ಟ್ 5, 2019 ರಂದು ಕೊನೆಗೊಳಿಸಲಾಯಿತು,” ಎಂದು ಅವರು ಹೇಳಿದರು.
ಕೃಪೆ:http://news13.in