• first
    second
    third
    Slide
    Slide
    previous arrow
    next arrow
  • ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು

    300x250 AD

    ಅಂಕೋಲಾ: ಇತ್ತೀಚೆಗೆ ತಾಲೂಕಿನ ಅವರ್ಸಾ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾರಿಗೆ ಸಂಸ್ಥೆ ಬಸ್ ಬಡಿದು ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
    ತಾಲೂಕಿನ ಹಟ್ಟಿಕೇರಿ ನಿವಾಸಿ ಮಹಾಬಲೇಶ್ವರ ನಾಯ್ಕ (56) ಮೃತ ದುರ್ದೈವಿ. ಈತ ಅ.19ರಂದು ಸಂಜೆ ಅವರ್ಸಾ ಕಾತ್ಯಾಯಿನಿ ದೇವಾಲಯದ ಮಹಾದ್ವಾರದ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅಂಕೋಲಾ ಕಡೆಯಿಂದ ಕಾರವಾರ ಕಡೆ ಸಾಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ, ಮತ್ತೊಂದು ವಾಹನಕ್ಕೆ ಓವರ್ ಟೇಕ್ ಮಾಡಿ ಬಂದು, ವಾಹನದ ಮೇಲಿನ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ದಾಟುತ್ತಿದ್ದ ಮಹಾಬಲೇಶ್ವರ ಅವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಅಲ್ಲಿಂದ ಮಂಗಳೂರು ವೆನಲಾಕ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು.

    300x250 AD
    Share This
    300x250 AD
    300x250 AD
    300x250 AD
    Back to top