ಕಾರವಾರ: ಜಿಲ್ಲೆಯ ಕಾರವಾರ, ಕುಮಟಾ, ಮುಂಡಗೋಡ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ತೆರವಾಗಿರುವ ಸ್ಥಾನಗಳಿಗೆ ಅ.28ರಂದು ಉಪ ಚುನಾವಣೆಯ ಮತದಾನ ನಡೆಯಲಿದೆ.
ಮತದಾನದ ಸಂದರ್ಭದಲ್ಲಿ ಆಯಾ ಕ್ಷೇತ್ರ ವ್ಯಾಪ್ತಿಯ ಪಂಚಾಯತಿಗಳಲ್ಲಿ, ಅ.28ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂತೆ, ಜಾತ್ರೆ, ಇತರ ಎಲ್ಲ ಜನಸಂದಣಿಯನ್ನು ನಿಷೇಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡಬೇಕು. ಮುಕ್ತ ಮತ್ತು ನ್ಯಾಯೋಚಿತ ಚುನಾವಣೆಯನ್ನು ನಡೆಸುವುದಕ್ಕಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.