ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಸಿ ಇವರು ಅ.27 ರಂದು ನಡೆಸಿದ್ದ ಶಿರಸಿ ತಾಲೂಕಾ ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಗೌರಿ ಬೆಲ್ಲದ್ ಹಾಗೂ ಹರ್ಷ ಪಟಗಾರ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರ ಸಾಧನೆಗೆ ಆಡಳಿತ ಮಂಡಳಿ,ಶಿಕ್ಷಕರು,ಪಾಲಕರು ಹರ್ಷವ್ಯಕ್ತಪಡಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.
ವಿಜ್ಞಾನ ವಸ್ತು ಪ್ರದರ್ಶನ: ಚಂದನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
