Slide
Slide
Slide
previous arrow
next arrow

ವಿಜ್ಞಾನ ವಸ್ತು ಪ್ರದರ್ಶನ: ಲಯನ್ಸ್ ವಿದ್ಯಾರ್ಥಿನಿ ಸ್ತುತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅ. 27 ರಂದು ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ತಾಲೂಕಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿರಸಿ ಲಯನ್ಸ್ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಸ್ತುತಿ ತುಂಬಾಡಿ ‘ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್’ ಎಂಬ ವಿಷಯದಡಿಯಲ್ಲಿ ಪ್ರದರ್ಶಿಸಿದ ವಿಜ್ಞಾನ ಮಾದರಿಗೆ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದರೊಂದಿಗೆ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.

ವಿದ್ಯಾರ್ಥಿನಿಗೆ ಲಯನ್ಸ್ ಶಾಲೆಯ ಸಹಶಿಕ್ಷಕಿಯರಾದ ಶ್ರೀಮತಿ ಶೃತಿ ಪವಾರ ಹಾಗೂ ಶ್ರೀಮತಿ ಕವಿತಾ ಭಟ್ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು, ಶಾಲೆಯ ಮುಖ್ಯಾಧ್ಯಾಪಕರು, ಶಿಕ್ಷಕ, ಶಿಕ್ಷಕೇತರ ಭಾಂದವರು, ಲಯನ್ಸ್ ಕ್ಲಬ್ ಬಳಗ ಮತ್ತು ವಿದ್ಯಾರ್ಥಿಯ ಪಾಲಕರು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top