ಅಂಕೋಲಾ: 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕೋಟಿ ಕಂಠ ಗಾಯನ ತಾಲೂಕು ಮಟ್ಟದ ಕಾರ್ಯಕ್ರಮ ಜೈಹಿಂದ್ ಹೈಸ್ಕೂಲ್ ಆವರಣದಲ್ಲಿ ನಡೆಯಿತು.
ಕನ್ನಡಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ಬಾವುಟ, ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ವಿವಿಧ ವೇಷಭೂಷಣಗಳೊಂದಿಗೆ ಪಾಲ್ಗೊಂಡು ಆರು ಕನ್ನಡದ ಗೀತೆಗಳನ್ನು ಹಾಡಿದರು.
ತಹಶೀಲ್ದಾರ ಉದಯ ಕುಂಬಾರ ಸಂಕಲ್ಪವಿಧಿ ಭೋದಿಸಿದರು. ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ, ಉಪಾಧ್ಯಕ್ಷೆ ರೇಖಾ ಗಾಂವಕರ್, ಮುಖ್ಯಾಧಿಕಾರಿ ಎನ್. ಎಂ.ಮೇಸ್ತ, ತಾಲೂಕು ವೈದ್ಯಾಧಿಕಾರಿ ನಿತಿನ್ ಹೊಸ್ಮೇಳಕರ, ತಾ.ಪಂ ಕಾರ್ಯನಿರ್ವಹಣ ಅಧಿಕಾರಿ ಪಿ ವೈ ಸಾವಂತ್, ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಜೈಹಿಂದ್ ಹೈಸ್ಕೂಲ್ ಮುಖ್ಯಾಧ್ಯಾಪಕ ಪ್ರಭಾಕರ ಬಂಟ, ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ ಶೆಟ್ಟಿ ಮೊದಲಾದವರು ಇದ್ದರು.