• Slide
    Slide
    Slide
    previous arrow
    next arrow
  • ಪುನೀತ್‌ ಪುಣ್ಯತಿಥಿ: ಸಿಎಂ ಸೇರಿದಂತೆ ಗಣ್ಯರಿಂದ ಗೌರವ ನಮನ

    300x250 AD

    ಬೆಂಗಳೂರು: ನಟ ಪುನೀತ್‌ ರಾಜ್‌ ಕುಮಾರ್‌ ಅವರ ಮೊದಲನೇ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

    ಟ್ವಿಟ್‌ ಮಾಡಿರುವ ಮುಖ್ಯಮಂತ್ರಿಗಳು, “ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾಕ್ಟರ್ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು” ಎಂದಿದ್ದಾರೆ.

    ಕನ್ನಡ ಚಿತ್ರರಂಗದ ಗಣ್ಯರು ಮತ್ತು ರಾಜಕೀಯ ನೇತಾರರು, ಕನ್ನಡಾಭಿಮಾನಿಗಳು ಎಲ್ಲರೂ ಇಂದು ಪುನೀತ್‌ ಅವರನ್ನು ಸ್ಮರಿಸಿ ನಮಿಸುತ್ತಿದ್ದಾರೆ.

    ಪುನೀತ್‌ ಅವರ ಕುಟುಂಬಸ್ಥರು ಅವರ ಸಮಾಧಿಗೆ ತೆರಳಿ ಇಂದು ಪೂಜೆ ನೆರವೇರಿಸಿದ್ದಾರೆ.

    300x250 AD

    ಇನ್ನೊಂದೆಡೆ ಪುನೀತ್‌ ಅಭಿನಯದ ಕೊನೆಯ ಚಿತ್ರ ʼಗಂಧದ ಗುಡಿʼ ರಾಜ್ಯಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

    ಕೃಪೆ:-http://news13.in

    Share This
    300x250 AD
    300x250 AD
    300x250 AD
    Leaderboard Ad
    Back to top