Slide
Slide
Slide
previous arrow
next arrow

ಶಿಕ್ಷಣ ಇಲಾಖೆಯ ಸಹಕಾರದಲ್ಲಿ ನಡೆದ ಕೋಟಿ ಕಂಠ ಕಾರ್ಯಕ್ರಮ

300x250 AD

ದಾಂಡೇಲಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ತಾಲ್ಲೂಕಾಡಳಿತದ ನೇತೃತ್ವ, ನಗರಸಭೆಯ ಸಹಭಾಗಿತ್ವ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದಲ್ಲಿ ಶುಕ್ರವಾರ ಹಳೆ ನಗರಸಭಾ ಮೈದಾನದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಲಾಯಿತು. ನಗರದ ಸೈಂಟ್ ಮೈಕಲ್ ಹಿರಿಯ ಪ್ರಾಥಮಿಕ ಶಾಲೆ, ಡಿ.ಎಫ್.ಎ ಹಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಬಂಗೂರನಗರ, ಹಿರಿಯ ಪ್ರಾಥಮಿಕ ಉರ್ದು ಶಾಲೆ ಬಂಗೂರನಗರ, ತೋಹಿದ್ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರ, ಆಂಗ್ಲೋ ಉರ್ದು ಪ್ರೌಢಶಾಲೆ ಟೌನಶಿಪ್, ಸೊರಗಾವಿ ಇಂಟರ್ ನ್ಯಾಷನಲ್ ಶಾಲೆ, ತೋಹಿದ್ ಪರವಿ ಪೂರ್ವ ಕಾಲೇಜು ಟೌನಶಿಪ್, ರೋಟರಿ ಹಿ.ಪ್ರಾ.ಶಾಲೆ ಮತ್ತು ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ಡಿಂಡಿಮ ಮೊಳಗಿಸಿದರು. ನಂತರ ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಂದ ಮತ್ತು ಸೋರಗಾವಿ ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ನಡೆದ ನೃತ್ಯ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ತಹಶೀಲ್ದಾರ್ ಶೈಲೇಶ ಪರಮಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಆರ್‌ಪಿ ಲಲಿತಾ ನಾಯ್ಕ ಸ್ವಾಗತಿಸಿದರು. ಸಂಕಲ್ಪ ವಿಧಿಯನ್ನು ಶಿಕ್ಷಕ ಸೀತಾರಾಮ ನಾಯ್ಕ ನೆರವೇರಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ರೆಜಿನಾ ವಂದಿಸಿದರು. ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಮೌಲಾಲಿ ಮುಲ್ಲಾ, ಡಿವೈಎಸ್ಪಿ ಗಣೇಶ್ ಕೆ.ಎಲ್., ಪೌರಾಯುಕ್ತ ಆರ್.ಎಸ್.ಪವಾರ್, ಸಿಪಿಐ ಬಿ.ಎಸ್.ಲೋಕಾಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ನಗರಸಭೆಯ ಸದಸ್ಯರು, ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top