Slide
Slide
Slide
previous arrow
next arrow

ಸದಾಶಿವಗಡ ಕೋಟೆಯಲ್ಲಿ ಕೋಟಿ ಕಂಠ ಗಾಯನ: ಚಿಣ್ಣರ ಕಂಠದಲ್ಲಿ ಮೊಳಗಿದ ಕನ್ನಡ ಡಿಂಡಿಮ

300x250 AD

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಚಿತ್ತಾಕುಲಾ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮ ತಾಲೂಕಿನ ಸದಾಶಿವಗಡ ಕೋಟೆಯ ಜಂಗಲ್ ರೆಸಾರ್ಟ್ ಆವಾರದಲ್ಲಿ ಜರುಗಿತು.
ಕಾರ್ಯಕ್ರಮವನ್ನ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು. ಶಾಸಕಿ ರೂಪಾಲಿ ನಾಯ್ಕ ಹಾಗೂ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೆಕರ ಅವರು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕುವೆಂಪುರವರ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ, ಚೆನ್ನವೀರ ಕಣವಿಯವರ ವಿಶ್ವವಿನೂತನ ವಿದ್ಯಾಚೇತನ, ಹಂಸಲೇಖರ ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ 6 ಹಾಡುಗಳನ್ನು ಹಾಡಲಾಯಿತು. ಬಳಿಕ ನಾಡನುಡಿ ಕನ್ನಡವನ್ನು ಪ್ರೀತಿಸುತ್ತೇವೆ ಮತ್ತು ಗೌರವಿಸುತ್ತೇವೆ ಎಂಬ ಪ್ರತಿಜ್ಞಾ ವಿಧಿಯನ್ನ ಬೋಧಿಸಲಾಯಿತಕಾರ್ಯಕ್ರಮಕ್ಕೆ ಗಣ್ಯರನ್ನು ಸಾಂಪ್ರದಾಯಿಕ ಹಾಗೂ ಕಹಳೆ ವಾದ್ಯದ ಮೂಲಕ ಬರಮಾಡಿಕೊಳ್ಳಲಾಯಿತು. ಶಾಲಾ ಮಕ್ಕಳು ಧರಿಸಿದ್ದ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಕೆಂಪೇಗೌಡ ಹಾಗೂ ಇನ್ನಿತರ ಕನ್ನಡದ ವೀರರ ವೇಷಭೂಷಣಗಳು ಗಮನ ಸೆಳೆದವು. ಇದೇ ವೇಳೆ ನಾಡಪ್ರಭು ಕೆಂಪೇಗೌಡರ 108 ಅಡಿಗಳ ಕಂಚಿನ ಭವ್ಯ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲು ‘ಬನ್ನಿ ನಾಡ ಕಟ್ಟೋಣ’ ಎಂಬ ಐತಿಹಾಸಿಕ ಅಭಿಯಾನವನ್ನು ಸಾರುವ ವಾಹನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಪಂಚಾಯತಿ ಸಿಇಒ ಪ್ರಿಯಾಂಗಾ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ, ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ, ತಹಶೀಲ್ದಾರ ನಿಶ್ಚಲ ನರೋನ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಇದ್ದರು.

300x250 AD
Share This
300x250 AD
300x250 AD
300x250 AD
Back to top