Slide
Slide
Slide
previous arrow
next arrow

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಮುಂಡಗೋಡಿನ ಸಹದೇವಪ್ಪ ನಡಿಗೇರ್

300x250 AD

ಮುಂಡಗೋಡ: ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ಈರಪ್ಪ ನಡಿಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ‌ ಮಾಡಿ ರಾಜ್ಯ ಸರ್ಕಾರ ಅ.30 ರಂದು ಘೋಷಣೆ ಮಾಡಿದೆ.

ಸಹದೇವಪ್ಪ ನಡಿಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸುತ್ತಿರುವ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ.

300x250 AD
Share This
300x250 AD
300x250 AD
300x250 AD
Back to top