ಶಿರಸಿ: ಇಲ್ಲಿಯ ಪ್ರಸಿದ್ಧ ಶ್ರೀಮಾರಿಕಾಂಬಾ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಉಳಿದಂತೆ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದೆ.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು ಭಕ್ತಾದಿಗಳಿಗೆ ದೇವಸ್ಥಾನದಲ್ಲಿ ಪೂಜೆ, ಪುನಸ್ಕಾರ ಮುಂತಾದ ಸೇವೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು ಶ್ರೀದೇವಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ದರ್ಶನಕ್ಕೆ ಬರುವ ಭಕ್ತಾದಿಗಳು ಕಡ್ಡಾಯವಾಗಿ ಮತ್ತು ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.