ಶಿರಸಿ :- ನಗರದ ಅರಣ್ಯ ಸಮುದಾಯ ಭವನದಲ್ಲಿ ನ.3 ರಂದು ದೇವಿಮನೆ ಔಷಧಿ ಸಸ್ಯಗಳ ಸಂರಕ್ಷಣಾ ಪ್ರದೇಶ ಶಿರಸಿ ವಿಭಾಗೀಯ ಮಟ್ಟದ ಅರಣ್ಯ ಅಧಿಕಾರಿಗಳ ಮತ್ತು ಮುಂಚೂಣಿ ಸಿಬ್ಬಂದಿಯ ಸಾಮರ್ಥ್ಯ ಮತ್ತು ಸಮನ್ವಯ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು ಕರ್ನಾಟಕ ಜೀವವೈವಿಧ್ಯ ಮಂಡಳಿ ,ಶಿರಸಿ ಅರಣ್ಯ ವಿಭಾಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿ ಪ್ರಾಯೋಜಿತ ಅಡಿಯಲ್ಲಿ ಈ ಕಾರ್ಯಾಗಾರ ನಡೆಯಲಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಟ್ರೀಲ್ಯಾಂಡ್ ಫೌಂಡೇಷನ್, ಬೆಂಗಳೂರಿನ
ಕೆ ಎನ್ ಮೂರ್ತಿ ಆಗಮಿಸಲಿದ್ದು, ಅತಿಥಿಗಳಾಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಜಿ ಎ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಎಸ್. ಅರೇಕಲ್,ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಜಿ.ಆರ್. ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಔಷಧೀಯ ಸಸ್ಯಗಳು,ಜೀವ ವೈವಿಧ್ಯತೆ ಹೀಗೆ ಹಲವು ವಿಷಯಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಆಯೋಜಿತವಾಗಿದೆ.
ಸಾರ್ವಜನಿಕರು ಮತ್ತು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಲು ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಮತ್ತು ಶಿರಸಿ ಅರಣ್ಯ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.