• Slide
    Slide
    Slide
    previous arrow
    next arrow
  • ಡಿಸೆಂಬರ್‌ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ: ಸುನಿಲ್‌ ಕುಮಾರ್

    300x250 AD

    ಮಂಗಳೂರು: ನವೆಂಬರ್ ತಿಂಗಳಲ್ಲಿ ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಸಮಗ್ರ ಮಸೂದೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.

    ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

    “ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕು. ಸರ್ಕಾರದ ಸುತ್ತೋಲೆಗಳು ಕನ್ನಡದಲ್ಲಿ ಇರಬೇಕು. ನ್ಯಾಯಾಲಯದ ಕಲಾಪಗಳು ಕೂಡ ಕನ್ನಡದಲ್ಲಿ ನಡೆಯಬೇಕು ಎನ್ನುವ ನಿಟ್ಟಿನಲ್ಲಿ ಕನ್ನಡ ಸಮಗ್ರ ಮಸೂದೆಯನ್ನು ರೂಪಿಸಿದ್ದೇವೆ. ಈ ಬಗ್ಗೆ ಸಾರ್ವಜನಿಕರಿಂದಲೂ ಅಗತ್ಯ ಸಲಹೆಗಳನ್ನು ಪಡೆಯಲಿದ್ದೇವೆ” ಎಂದಿದ್ದಾರೆ.

    300x250 AD

    “ಗಡಿಗ್ರಾಮಗಳ ಅಭಿವೃದ್ಧಿಗಾಗಿ 21 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕೈಯಾರ ಕಿಞ್ಞಣ್ಣ ರೈ ಅವರ ಸ್ಮಾರಕ ನಿರ್ಮಾಣಕ್ಕೆ 50 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 275 ಕನ್ನಡ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಶಾಲೆಗಳಲ್ಲಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ 39 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಮಕ್ಕಳಲ್ಲಿ ಗಣಿತ ಮತ್ತು ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ 22 ಜಯಶಾಲೆಗಳನ್ನು ಅಮೃತ ಶಾಲೆ ಎಂದು ಗುರುತಿಸಲಾಗಿದೆ” ಎಂದಿದ್ದಾರೆ.

    ಕೃಪೆ : http://news13.in

    Share This
    300x250 AD
    300x250 AD
    300x250 AD
    Leaderboard Ad
    Back to top