Slide
Slide
Slide
previous arrow
next arrow

ತೂಗು ಸೇತುವೆ ಮೇಲೆ ಕಾರು ಚಲಾಯಿಸಿದ ಪ್ರವಾಸಿಗರು: ಸ್ಥಳೀಯರ ಆಕ್ಷೇಪ

300x250 AD

ಯಲ್ಲಾಪುರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರನ್ನು ಚಲಾಯಿಸಿಕೊಂಡು ಹೋಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಜನರು ಓಡಾಡುವ ತೂಗು ಸೇತುವೆಯಲ್ಲಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದಕ್ಕೆ ಸ್ಥಳೀಯರು ಆಕ್ಷೇಪಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ. ಸೇತುವೆಯಲ್ಲಿ ಸಾಗಿ ಬಹುದೂರ ಬಂದ ಕಾರನು, ಸಯರು ತಡೆದು ಬಂದ ದಾರಿಗೆ ಹಿಂದಕ್ಕೆ
ಕಳುಹಿಸಿದ್ದು, ಕಾರು ಚಲಾಯಿಸಿ ಸೇತುವೆಗೆ ಹಾನಿಯಾಗಿ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
ಗುಜರಾತ್‌ನ ಮೊರ್ಬಿಯಲ್ಲಿ ತೂಗುಸೇತುವೆ ಕುಸಿದು ನೂರಾರು ಜನ ಮೃತಪಟ್ಟ ಘಟನೆ ಮುಂದಿರುವಾಗಲೇ ಕೆಲವರು ಎಚ್ಚೆತ್ತುಕೊಳ್ಳದೇ ಇರುವುದು ದುರಂತವಾಗಿದೆ.

ಪ್ರಸಿದ್ಧ ಯಾತ್ರಾಸ್ಥಳ ಜೊಯಿಡಾ ತಾಲೂಕಿನ ಉಳವಿಯಿಂದ ಬರುವ ಅನೇಕ ಮಂದಿ ಶಿವಪುರದ ತೂಗುಸೇತುವೆಗೆ ಭೇಟಿ ನೀಡುತ್ತಾರೆ. ಅಲ್ಲಿನ ಪ್ರಾಕೃತಿಕ ಸೌಂದರ್ಯದ ಕಾರಣ ಪುವಾಸಿ ತಾಣವಾಗಿಯೂ ಮಾರ್ಪಟ್ಟಿದ್ದು, ಹಲವು ಗ್ರಾಮಸ್ಥರಿಗೆ ಈ ತೂಗು ಸೇತುವ ದೈನಂದಿನ ಜೀವನದ ಅಗತ್ಯ ಸೌಕರ್ಯವಾಗಿದೆ.

300x250 AD

ಪ್ರವಾಸಕ್ಕೆ ಬಂದ ಕೆಲವರು ಸೇತುವೆಯ ಮೇಲೆ ಇಕ್ಕಟ್ಟಾದ ಜಾಗದಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಾರೆ. ಕಾರು ಬಂದಾಗ ಸೇತುವೆಯಲ್ಲಿ ನಡೆದುಕೊಂಡು ಹೋಗಲು ಕೂಡ ಜಾಗವಿರುವುದಿಲ್ಲ. ಇದೊಂದು ದುಃಸ್ಸಾಹಸ, ಕಾರನ್ನು ಅದರಲ್ಲಿ ತರಬೇಡಿ ಎಂದು ಗ್ರಾಮದ ಹಿರಿಯರು ಕಿವಿಮಾತು ಹೇಳಿದರೂ ಧಿಕ್ಕರಿಸುತ್ತಿದ್ದು,ಅಂಥವರ ವಿರುದ್ಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೇತುವೆಗೆ ಅಪಾಯವಾಗದಂತೆ ಕಾಪಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇನ್ನು ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಕೋಟಾ ಶ್ರೀನಿವಾಸ ಪೂಜಾರಿ ಸಹ ಪ್ರತಿಕ್ರಿಯಿಸಿದ್ದು ಈ ರೀತಿಯಾಗಿ ಪ್ರವಾಸಿಗರು ನಡೆದುಕೊಳ್ಳುತ್ತಿರುವುದು ಸರಿಯಲ್ಲ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಹಲವು ತೂಗುಸೇತುವೆಗಳು ಸುಸ್ತಿತಿಯಲ್ಲಿ ಇಲ್ಲ ಹೀಗಾಗಿ ಜಿಲ್ಲೆಯಲ್ಲಿರುವ ತೂಗುಸೇತುವೆಯ ಗುಣಮಟ್ಟವನ್ನು ಅಧ್ಯಯನಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

Share This
300x250 AD
300x250 AD
300x250 AD
Back to top