ಅಂಕೋಲಾ : ಪುರಸಭೆ ವ್ಯಾಪ್ತಿಯಲ್ಲಿನ ಮಳಿಗೆಗಳ ಬಾಡಿಗೆಗಳ ವಸೂಲಿಯಲ್ಲಿ ನಡೆದ ಅವ್ಯವಹಾರದ ಕುರಿತು ತನಿಖೆ ನಡೆದಿದ್ದು ಅವ್ಯವಹಾರ ನಡೆಸಿದ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲು ತಹಶೀಲ್ದಾರ ಮತ್ತು ಪುರಸಭೆ ಮುಖ್ಯಾಧಿಕಾರಿ ಜಿಲ್ಲಾಧಿಖಾರಿಗಳ ಬಳಿ ಹೇಳಿಕೊಂಡಿದ್ದಾರೆ.
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಪ್ರಥಮ ಬಾರಿಗೆ ತಾಲೂಕಿಗೆ ಆಗಮಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆರವರು ಅಂಕೋಲಾ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಂದರ್ಭದಲ್ಲಿ ಪುರಸಭೆಯಲ್ಲಿ ನಡೆದ ಅವ್ಯವಹಾರದ ಕುರಿತು ತಹಶೀಲ್ದಾರ ಉದಯ ಕುಂಬಾರ ಮತ್ತು ಪುರಸಭಾ ಮುಖ್ಯಾಧಿಕಾರಿ ಎನ್.ಎಮ್.ಮೇಸ್ತಾ ಜಿಲ್ಲಾಧಿಕಾರಿಗಳ ಬಳಿ ಹೇಳಿದ್ದಾರೆ. ಈಗಾಗಲೇ ಪುರಸಭಾ ವ್ಯಾಪ್ತಿಯಲ್ಲಿನ ಅಂಗಡಿ ಮಳಿಗೆಗಳ ಬಾಡಿಗೆ ವಸೂಲಿಯಲ್ಲಿ ಅವ್ಯವಹಾರ ತನಿಖೆ ನಡೆಸಲಾಗಿತ್ತು ಜಿಲ್ಲಾಧಿಕಾರಿ ಕಾರ್ಯಾಲಯದ ತಂಡ ಆಗಮಿಸಿ ತನಿಖೆ ನಡೆಸಿ ಪೂರ್ಣಗೊಳಿಸಿದ್ದಾರೆ. ಇದರ ವರದಿಯನ್ನು ಜಿಲ್ಲಾಧಿಕಾರಿ ಬಳಿ ನೀಡಲಾಗಿದೆ. ಇದರನ್ವಯ ಅವ್ಯವಹಾರದಲ್ಲಿ ಯಾರು ತಪ್ಪಿತಸ್ಥರಿದ್ದಾರೆ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದರು.
ಪುರಸಭೆಯಲ್ಲಿ ಈ ಸ್ವತ್ತು ಸಮಸ್ಯೆ ನಿರಂತರವಾಗಿ ಕಾಡುತ್ತಿದೆ. ಅಲ್ಲಿದೆ ಅಂಭಿಯಂತರ ಹುದ್ದೆಯು ಖಾಲಿ ಇದೆ. ಶಿರಸಿಯಿಂದ ವಾರದಲ್ಲಿ ಒಂದು ದಿನ ಮಾತ್ರ ಇಲ್ಲಿಗೆ ನಿಯೋಜನೆ ಮಾಡಲಾಗಿದೆ ಎಂದು ಮುಖ್ಯಾಧಿಕಾರಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ತಾಲೂಕಿನ ಎಲ್ಲಾ ಅಧಿಕಾರಿಗಳು ತಮ್ಮ ಪರಿಚಯವನ್ನು ಮಾಡಿಕೊಂಡು ತಮ್ಮ ಇಲಾಖೆ ಕುರಿತು ಮಾಹಿತ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಾಘವೇಂದ್ರ, ತಹಶೀಲ್ದಾರ ಉದಯ ಕುಂಬಾರ ಉಪಸ್ಥಿತರಿದ್ದರು.