• Slide
    Slide
    Slide
    previous arrow
    next arrow
  • ಕಾರವಾರದಲ್ಲಿ ವಿಜೃಂಭಣೆಯ ಕನ್ನಡ ರಾಜ್ಯೋತ್ಸವ: ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    300x250 AD

    ಕಾರವಾರ: ಜಿಲ್ಲಾ ಪೊಲೀಸ್ ಮೈದಾನದಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣವನ್ನು ನೆರವೇರಿಸಿದರು. ಆಕರ್ಷಕ ಪಥ ಸಂಚಲನದಲ್ಲಿ ಸಶಸ್ತ್ರ ಮೀಸಲು ಪೊಲೀಸ್, ನಾಗರೀಕ ಪೊಲೀಸ್, ಮಹಿಳಾ ಪೊಲೀಸ್ ಅರಣ್ಯ ಇಲಾಖೆ, ಹಾಗೂ ವಿವಿಧ ಶಾಲಾ ಮಕ್ಕಳ ತಂಡಗಳು ಭಾಗವಹಿಸಿದ್ದವು. ವಿವಿಧ ಇಲಾಖೆಗಳಿಂದ ತಯಾರಿಸಿದ ಸ್ತಬ್ದ ಚಿತ್ರಗಳು ಭಾಗಿಯಾಗಿದ್ದವು.

    ಕಾರ್ಯಕ್ರಮದಲ್ಲಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ, ಶಾಸಕರು, ಜಿಲ್ಲಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲೆಯ ವಿವಿಧ ಅಧಿಕಾರಿಗಳು, ಶಾಲಾ ಮಕ್ಕಳು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಕನ್ನಡಾಭಿಮಾನಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top