Slide
Slide
Slide
previous arrow
next arrow

ಧ್ವಜಾರೋಹಣ ಮೂಲಕ 67ನೇ ಕರ್ನಾಟಕ ರಾಜ್ಯೋತ್ಸವದ ಆಚರಣೆ

300x250 AD

ಕಾರವಾರ: 67ನೇ ಕರ್ನಾಟಕ ರಾಜ್ಯೋತ್ಸವವನ್ನು ತಾಲೂಕಿನ ನಗೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಧ್ವಜಾರೋಹಣ ನಡೆಸುವ ಮೂಲಕ ಆಚರಿಸಿದರು. ಮುಖ್ಯಾಧ್ಯಾಪಕ ಅಖ್ತರ ಸೈಯದ್ ಅವರು ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿ ರೂಪಾ ಉಮೇಶ ನಾಯ್ಕ, ಅಡುಗೆ ಸಿಬ್ಬಂದಿಗಳಾದ ಶೋಭಾ ಗೌಡ, ಕಾಂಚನಾ ಗೌಡ, ಅಂಗನವಾಡಿ ಕಾರ್ಯಕರ್ತೆ ಸುಗಂಧಿ ಗೌಡ, ಎಸ್.ಡಿ.ಎಂ.ಸಿ.ಯವರು, ಪಾಲಕರು, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಸಿಹಿ ಹಂಚಲಾಯಿತು.

300x250 AD
Share This
300x250 AD
300x250 AD
300x250 AD
Back to top