ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಮುಖ್ಯಸ್ಥರು ಹಾಗೂ ನಿರ್ದೇಶಕರಾದ ಡಾ. ಗಜಾನನ ನಾಯಕರವರು ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಅರ್ಪಿಸಿ, ನಮ್ಮ ನಾಡು ನಮ್ಮ ಭಾಷೆಯ ಮಹತ್ವದ ಕುರಿತು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಆಡಳಿತಾಧಿಕಾರಿ ಟಿ.ಎಸ್.ಹಾದಿಮನಿ, ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ ಕುಡ್ತರಕರ್, ಪ್ರಾಂಶುಪಾಲ ಡಾ.ಶಿವಕುಮಾರ ಜಿ.ಎಲ್., ಆರ್ಥಿಕ ಸಲಹೆಗಾರ ಡಾ.ಆನಂದ ಸಾ., ಸ್ಥಾನಿಕ ವೈದ್ಯಾಧಿಕಾರಿ ಡಾ.ಮಂಜುನಾಥ ಭಟ್, ಉಪ ವೈದ್ಯಕೀಯ ಅಧೀಕ್ಷಕ ಡಾ.ಮಧುಕರ್ ಹಾಗೂ ಸಂಸ್ಥೆಯ ಪ್ರಾಧ್ಯಾಪಕರು, ಬೋಧಕ, ಬೋಧಕೇತರ ವೈದ್ಯರು ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವದ ಕುರಿತು ಸಂಸ್ಥೆಯ ವೈದ್ಯಕೀಯ ಅಧೀಕ್ಷಕರು, ಪ್ರಾಂಶುಪಾಲರು ಹಾಗೂ ಆರ್ಥಿಕ ಸಲಹೆಗಾರರು ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ನಿಧಿ ಎಂ.ಕೆ. ಮಾಡಿದರು. ಕನ್ನಡ ಸಂಘದ ಕಾರ್ಯದರ್ಶಿ ವೈದ್ಯ ವಿದ್ಯಾರ್ಥಿ ಅಭಿಷೇಕ್ ಪಾಟಿಲ್ ರವರ ವಂದನಾರ್ಪಣೆಯೊAದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.