ಕುಮಟಾ: ಕನ್ನಡ ಭಾಷೆಯ ಉಳಿವಿಗಾಗಿ ಎಲ್ಲ ಕನ್ನಡಿಗರೂ ಬೇಧ ಭಾವ ಮರೆತು ಒಂದಾಗಬೇಕು ಎಂದು ಡಾ.ಶ್ರೀಧರ ನಾಯ್ಕ ಕರೆ ನೀಡಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು. ಕನ್ನಡ ಭಾಷೆ ಬೆಳೆದು ಬಂದ ಬಗೆಯನ್ನು ವಿವರಿಸುತ್ತ, ಇತ್ತೀಚಿನ ಹಿಂದಿ ಭಾಷೆಯ ಹೇರಿಕೆಯನ್ನು ವಿರೋಧಿಸಿದರು.
ಕಾಲೇಜಿನ ಪ್ರಾಚಾರ್ಯರಾದ ವಿಜಯಾ ನಾಯ್ಕ ಮಾತನಾಡಿ, ನಾವೆಲ್ಲೇ ಇದ್ದರೂ ಕನ್ನಡ ಭಾಷೆಯನ್ನು ಗೌರವಿಸುವುದು ನಮ್ಮ ಮೊದಲ ಆದ್ಯತೆಯಾಗಬೇಕಿದೆ ಎಂದರು. ರಾಜ್ಯೋತ್ಸವದ ಅಂಗವಾಗಿ ಜರುಗಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವೇದಿಕೆಯಲ್ಲಿ ಹಿರಿಯ ಉಪನ್ಯಾಸಕರಾದ ಡಾ.ವಿ.ಎಮ್.ನಾಯಕ,ಡಾ.ಗೀತಾ ನಾಯಕ,ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಪ್ರೊ.ಮೂರ್ತಿ ಐ.ಆರ್,ವಿದ್ಯಾರ್ಥಿ ಪ್ರತಿನಿಧಿಗಳಾದ ಪವಿತ್ರಾ ಹೆಗಡೆ,ದಿವ್ಯಾ ಆಚಾರಿ ಭಾಗವಹಿಸಿದ್ದರು.