• first
    second
    third
    Slide
    previous arrow
    next arrow
  • ಶಟಲ್ ಬ್ಯಾಡ್ಮಿಂಟನ್: ಲಯನ್ಸ್ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

    300x250 AD

    ಶಿರಸಿ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ ಶಿರಸಿ (ಉ.ಕ) ರವರ ಸಹಯೋಗದಲ್ಲಿ ಬ್ಲೂ ಸ್ಟಾರ್ ಅಕಾಡೆಮಿ, ಶಿರಸಿಯಲ್ಲಿ ನಡೆಸಲಾದ 2022-23ನೇ ಸಾಲಿನ ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ 14 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಅಥರ್ವ ನಾಯಕ, ಶ್ರೇಯಸ್ ಹೆಗಡೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರಲ್ಲಿ ಕುಮಾರ ಅಥರ್ವ ನಾಯಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕಿಯಾದ ಶ್ರೀಮತಿ ಚೇತನಾ ಪಾವಸ್ಕರ್ ಮಾರ್ಗದರ್ಶನ ನೀಡಿರುತ್ತಾರೆ. ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಪ್ರಶಸ್ತಿ ಪತ್ರ ಹಾಗೂ ಮೆಡಲ್ ತಮ್ಮದಾಗಿಸಿಕೊಂಡು ಶಾಲೆಯ ಕೀರ್ತಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಾಲೆಯ ಮುಖ್ಯೋಪಾಧ್ಯಾಯ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ಬಾಂದವರು, ಲಯನ್ಸ್ ಕ್ಲಬ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top