ಹಳಿಯಾಳ: ತಾಲೂಕಿನಲ್ಲಿ ಕಳೆದ 37 ದಿನಗಳಿಂದ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಪ್ರತಿಭಟನೆ ತಾರಕಕ್ಕೇರಿದ ಪರಿಣಾಮ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಲಾರಿ ತಡೆದು ಕಲ್ಲು ಎಸೆದ ದುರ್ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಲಾರಿ ಎದುರು ಅಡ್ಡಬಿದ್ದು ಕಬ್ಬು ಸಾಗಿಸದಂತೆ ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಭಾರೀ ಪೊಲೀಸ್ ಬೀಗು ಬಂದೋಬಸ್ತ್ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೋಲೀಸರು ಲಾಠಿ ಬೀಸಿದ್ದಾರೆ ಎನ್ನಲಾಗಿದ್ದು, ಹಳಿಯಾಳ ಪೊಲೀಸ್ ಠಾಣೆ ಎದುರು ಸಾವಿರಾರು ಸಂಖ್ಯೆಯಲ್ಲಿ ಕಬ್ಬು ಬೆಳೆಗಾರರು ಜಮಾಯಿಸಿದ್ದಾರೆ.
ಹಳ್ಳಿ ಹಳ್ಳಿಗಳಿಂದ ರಾತ್ರಿ ಠಾಣೆಗೆ ರೈತರು ಜಮಾಯಿಸುತ್ತಿದ್ದು, ಕಬ್ಬು ಬೆಳೆಗಾರರ ಸಮಸ್ಯೆಗೆ ಇದುವರೆಗೂ ಸರಕಾರ ಸ್ಪಂದಿಸದಿರುವುದು ಬೆಳೆಗಾರರನ್ನು ಆತಂಕಕ್ಕೀಡುಮಾಡಿದೆ. ಸರಕಾರದ ವಿರುದ್ಧ ಕಬ್ಬು ಬೆಳೆಗಾರರರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕಳೆದ 37ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ನಡೆಯುತ್ತಿದೆ. ಕಳೆದ ಆರು ದಿನಗಳಿಂದ ಆಮರಣಾಂತ ಉಪವಾಸ ಪ್ರತಿಭಟನೆಯನ್ನು ಬೆಳೆಗಾರರು ನಡೆಸುತ್ತಿದ್ದಾರೆ ಎನ್ನಲಾಗಿದೆ.