Slide
Slide
Slide
previous arrow
next arrow

ಬಿಸಿಎನಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ

300x250 AD

ಹೊನ್ನಾವರ: ಕ.ವಿ.ವಿ. ಧಾರವಾಡ ನಡೆಸಿದ ಬಿ.ಸಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿಸಿಎ 6ನೇ ಸಮಿಸ್ಟರ್‌ನ ಎಲ್ಲಾ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ 100 ಫಲಿತಾಂಶ ದಾಖಲಾಗಿದೆ.

ಕರುಣಾ ಗೌಡ 94.38%, ಶ್ರುತಿ ನಾಯಕ 90.37% ಹಾಗೂ ಆಶಿಕಾ ಭಂಡಾರಿ 89.87% ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಬಿ.ಸಿ.ಎ. ವಿಭಾಗದ ಮುಖ್ಯಸ್ಥರಾದ ವಂದನಾ ಹೆಗಡೆ, ಪ್ರಾಚಾರ್ಯರಾದ ಡಾ.ವಿಜಯಲಕ್ಷ್ಮಿ ನಾಯ್ಕ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಎಲ್ಲಾ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top