Slide
Slide
Slide
previous arrow
next arrow

ಯಶಸ್ವಿಯಾಗಿನಡೆದ ಬಿಜೆಪಿಯ ಚಿತ್ತಾಕುಲಾ ಮಹಾಶಕ್ತಿ ಕೇಂದ್ರದ ಸಭೆ

300x250 AD

ಕಾರವಾರ: ಸದಾಶಿವಗಡದ ಪುರುಷೋತ್ತಮ ಹಾಲ್‌ನಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಚಿತ್ತಾಕುಲಾ ಮಹಾಶಕ್ತಿ ಕೇಂದ್ರದ ಸಭೆ ಯಶಸ್ವಿಯಾಗಿ ನಡೆಯಿತು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಹೆಸಳೆಯವರು ಮಾತನಾಡಿ, ಮುಂಬರುವ ದಿನಗಳಲ್ಲಿ ಸಂಘಟನೆ ಇನ್ನೂ ಬಲಪಡಿಸಬೇಕಾಗಿ ಕರೆಕೊಟ್ಟರು. ಹಾಗೆಯೇ ಬೂತ್ ಮಟ್ಟದಲ್ಲಿ ಬಿಜೆಪಿಯ ಕಾರ್ಯಕರ್ತರು ಇನ್ನೂ ಸಕ್ರಿಯರಾಗಿ ಕೆಲಸ ಮಾಡಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ರಾಜ್ಯದಲ್ಲಿ ಜಯಭೇರಿಯನ್ನಾಗಿ ಮಾಡಬೇಕೆಂದು ಹೇಳಿದರು.

ಬಿಜೆಪಿ ಗ್ರಾಮೀಣ ಮಂಡಲ ಪ್ರಭಾರಿ ಗಜಾನನ ಗುನಗಾ ಮಾತನಾಡಿ, ಪ್ರತಿಯೊಬ್ಬ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರ ಪಡೆ ಚುನಾವಣೆ ಎದುರಿಸಲು ಯಾವುದೇ ಸಂದರ್ಭದಲ್ಲಿ ತಯಾರಾಗಿರಬೇಕು ಎಂದು ಹೇಳಿದರು.

300x250 AD

ಬಿಜೆಪಿ ಗ್ರಾಮೀಣ ಅಧ್ಯಕ್ಷ ಸುಭಾಷ ಗುನಗಿ ವೇದಿಕೆಯ ಮೇಲಿದ್ದ ಗಣ್ಯರನ್ನು ಸ್ವಾಗತಿಸಿದರು. ಸಭೆಯಲ್ಲಿ ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಸದಸ್ಯ ಎನ್.ಬಿ.ಸೂರ್ಯಪ್ರಕಾಶ, ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಉದಯ ಬಶೆಟ್ಟಿ, ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಸುಜಾತಾ ಬಾಂದೇಕರ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಕಿಶನ್ ಕಾಂಬಳೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಮೋರ್ಚಾದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಭಾರಿಗಳು, ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಿದ

Share This
300x250 AD
300x250 AD
300x250 AD
Back to top