Slide
Slide
Slide
previous arrow
next arrow

ಕ್ರೀಡಾಕೂಟ: ಲೊಯೋಲಾ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

300x250 AD

ಮುಂಡಗೋಡ: ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ 110 ಮೀ. ಹರ್ಡಲ್ಸ್ನಲ್ಲಿ ಲೊಯೋಲಾ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೇಮ ಸಿದ್ದಿ ಪ್ರಥಮ ಹಾಗೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಸ್ಟ್ಯಾಲಿಯೊ ನಾಯಕ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.

ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದ ಜಾವೆಲಿನ್ ಥ್ರೋ ವಿಭಾಗದಲ್ಲಿ ಲೊಯೋಲಾ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ಕಲಾ ವಿಭಾಗದ ವಿದ್ಯಾರ್ಥಿ ಜೊಯಲ್ ಮಾನ್ವಿಲ್ ಸಿದ್ದಿ ಪಡೆದುಕೊಂಡಿದ್ದಾನೆ. ವಿದ್ಯಾರ್ಥಿಗಳ ಸಾಧನೆಗೆ ಲೊಯೋಲಾ ಸಂಸ್ಥೆ ಆಡಳಿತ ಮಂಡಳಿ ಹಾಗೂ ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕ ವಿ.ವಿ.ಮಲ್ಲನಗೌಡರ್ ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top