• first
  second
  third
  Slide
  previous arrow
  next arrow
 • ಸಚಿವ ಹೆಬ್ಬಾರ್ ಸೋಲಿಸುವುದೇ ಪ್ರಮುಖ ಗುರಿ: ವಿ.ಎಸ್.ಪಾಟೀಲ

  300x250 AD

  ಮುಂಡಗೋಡ: ಮಾಜಿ ಶಾಸಕ ವಿ.ಎಸ್.ಪಾಟೀಲ ಗುರುವಾರ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗಿದೆ.
  ಈಗಾಗಲೇ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಅರ್ಜಿ ನೀಡಿದ್ದೇನೆ. ಪಕ್ಷದ ನಿಯಮಾವಳಿ ಪ್ರಕಾರ ಸೇರ್ಪಡೆ ಕಾರ್ಯಕ್ರಮ ಜರುಗಲಿದೆ ಎಂದು ಪಾಟೀಲ ತಿಳಿಸಿದ್ದಾರೆ.
  ತಾವು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಕರೆದು ತಾಲೂಕಿನಲ್ಲಿಯೇ ಬೃಹತ್ ಸೇರ್ಪಡೆ ಕಾರ್ಯಕ್ರಮವನ್ನು ಏರ್ಪಡಿಸಲು ಉತ್ಸಕನಾಗಿದ್ದೇನೆ. ಮುಂಡಗೋಡನಲ್ಲಿ ಜರುಗುವ ಸೇರ್ಪಡೆ ಕಾರ್ಯಕ್ರಮಕ್ಕೆ ಬರುವ ನಾಯಕರು ಯಾವ ದಿನಾಂಕ ನೀಡುತ್ತಾರೆಯೋ ಗೊತ್ತಿಲ್ಲ. ನಾವು ಎಲ್ಲರೂ ಕೂಡಿಕೊಂಡು ಪಕ್ಷವನ್ನು ಬಲವಾಗಿ ಸಂಘಟಿಸೋಣ ತಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಹೇಳಿದರು.
  ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಪುತ್ರರಾದ ಪ್ರಶಾಂತ ದೇಶಪಾಂಡೆ ಬಂದರೆ ಚೆನ್ನಾಗಿರುತ್ತದೆ. ನಾವು ಒಟ್ಟಾಗಿ ಕ್ಷೇತ್ರದಲ್ಲಿ ಸಂಚರಿಸಿ ಪಕ್ಷವನ್ನು ಬಲಿಷ್ಠ ಮಾಡುವುದು ಅತ್ಯಾವಶ್ಯಕವಾಗಿದೆ. ಪಕ್ಷವು ಏನೇ ತೀರ್ಮಾನ ಕೈಗೊಂಡರು ಪಕ್ಷದ ಸಿದ್ಧಾಂತಗಳಿಗೆ ಬದ್ಧನಾಗಿದ್ದೇನೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ. ನನ್ನ ಗುರಿ ಕ್ಷೇತ್ರದ ಮಂತ್ರಿ ಶಿವರಾಮ ಹೆಬ್ಬಾರ್ ಅವರನ್ನು ಸೋಲಿಸುವುದೇ ಆಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

  300x250 AD
  Share This
  300x250 AD
  300x250 AD
  300x250 AD
  Back to top