Slide
Slide
Slide
previous arrow
next arrow

50% ರಿಯಾಯಿತಿ ದರಗಳಲ್ಲಿ ಪುಸ್ತಕ ಮಾರಾಟ

300x250 AD

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 458 ಶೀಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಇವುಗಳನ್ನು ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಪುಸ್ತಕಗಳನ್ನು ಶೇಕಡಾ 50% ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಇದು ನವೆಂಬರ್ ತಿಂಗಳು ಪೂರ್ತಿ ಇರಲಿದೆ.
ಆಸಕ್ತ ಪುಸ್ತಕ ಪ್ರಿಯರು ಈ ಪುಸ್ತಕಗಳನ್ನು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹಾಗೂ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಪಡೆಯಬಹುದಾಗಿದೆ. ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ ವೆಬ್‌ಸೈಟ್ನಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆhttp://www.kannadapustakapradhikara.com ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ ಎಂದು ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top