ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.06ರಂದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟೂ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಪ್ರಾರಂಭವಾಗುವ ಮುನ್ನ 1 ಘಂಟೆ ಮುಂಚಿತವಾಗಿ ಹಾಜರಿರಬೇಕು. ಆ ನಂತರದಲ್ಲಿ ಬರುವ ಯಾವದೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದೊಳಗೆ ಪ್ರವೇಶವನ್ನು ನಿಷೇದಿಸಲಾಗಿದೆ. ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಯಾವದೇ ಎಲೆಕ್ಟ್ರಾನಿಕ್ಸ್ ಮೊಬೈಲ್, ಕ್ಯಾಲ್ಕುಲೇಟರ್, ಎಲೆಕ್ಟ್ರಾನಿಕ್ಸ್ ವಾಚ್, ಮೈಕ್ರೋ ಫೋನ್, ಬ್ಲೂಟೂತ್ ಉಪಕರಣಗಳನ್ನು ತರುವಂತಿಲ್ಲ. ಅಲ್ಲದೆ ಶೂ ಮತ್ತು ಸಾಕ್ಸ್ ಹಾಕಿಕೊಂಡು ಬರುವುದನ್ನು ನಿಷೇದಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಸಿದ್ದಾರೆ.