ಕಾರವಾರ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಜ.01ಕ್ಕೆ ಇದ್ದಂತೆ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.
ಈ ಜೇಷ್ಠತಾ ಪಟ್ಟಿಯಿಂದ ಬಾಧಿತರಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನ.5ರೊಳಗಾಗಿ ಅಕ್ಷೇಪಣೆ ಸಲ್ಲಿಸಬಹುದಾಗಿದೆ. ನಂತರದಲ್ಲಿ ಸಲ್ಲಿಸುವ ಯಾವುದೇ ಅಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಪ್ರಕಟಣೆಯಲ್ಲಿ ತಿಳಸಿದ್ದಾರೆ.
ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
