Slide
Slide
Slide
previous arrow
next arrow

ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಕಾಮಗಾರಿ ಕೈಗೊಳ್ಳಲು ಮುಂದಾಗೋಣ: ದೇವರಾಜ್

300x250 AD

ಶಿರಸಿ: ನರೇಗಾ ಕಾಮಗಾರಿಗಳಲ್ಲಿ ವೈಜ್ಞಾನಿಕ ತಂತ್ರಜ್ಞಾನ ಬಳಸಿ ಮಣ್ಣು, ನೀರು, ಹಸಿರು ಕಾಪಾಡುವಲ್ಲಿ ಪ್ರಯತ್ನಿಸೋಣ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಹಿತ್ತಲಕೊಪ್ಪ ಅಭಿಪ್ರಾಯಪಟ್ಟರು.
ತಾಲೂಕಿನ ಅಬ್ದುಲ್ ನಜೀರ ಸಾಬ ಸಭಾಭವನದಲ್ಲಿ ನಡೆದ ಜಲ ಸಂಜೀವಿನಿ ಕಾರ್ಯಕ್ರಮದಡಿ ಜಿಯೋ ಸ್ಪೆಷಿಯಲ್ ತಂತ್ರಜ್ಞಾನವನ್ನು ಬಳಸಿಕೊಂಡು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಕಾಮಗಾರಿಗಳ ಅನುಷ್ಠಾನಗೊಳಿಸಲು ಕೈಗೊಂಡ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಜನರ ಬೇಡಿಕೆಗನುಗುಣವಾಗಿ ಯಾವುದೇ ವೈಜ್ಞಾನಿಕ ವಿಧಾನಗಳನ್ನು ಅನುಸರಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರದ ಆದೇಶದಂತೆ ಜಿಯೋ ಸ್ಪೆಷಿಯಲ್ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ನಮ್ಮಲ್ಲಿರುವ ಸಂಪನ್ಮೂಲಗಳ ರಕ್ಷಣೆಯು ಸಾಧ್ಯ ಎಂದರು.
ಈ ವೇಳೆ ಹಳಿಯಾಳ ಹಾಗೂ ಜೊಯಿಡಾ ಗ್ರಾಮ ಪಂಚಾಯತ್‌ನ ತಾಂತ್ರಿಕ ಸಂಯೋಜಕರಾದ ಮಹೇಶ ಪಟಗಾರ್ ಹಾಗೂ ಸುಮಿರ್ ಗಿರಪ್ ಜಲಮೂಲಗಳು, ಸಸ್ಯ ಸಂರಕ್ಷಣೆ, ಹಾಗೂ ಮಣ್ಣಿನ ಸಂರಕ್ಷಣೆಯಲ್ಲಿ ವೈಜ್ಞಾನಿಕ ವಿಧಾನಗಳನ್ನು ಅನುಸರಿಸಿದರೆ ಆಗುವ ಪ್ರಯೋಜನಗಳು ಹಾಗೂ ಮಹತ್ವದ ಕುರಿತು ಸೈದ್ಧಾಂತಿಕ ಹಾಗೂ ಪ್ರಾಯೋಗಿಕವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ನರೇಗಾ ಸಹಾಯಕ ನಿರ್ದೇಶಕ ರಾಮಮೂರ್ತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ತಾಂತ್ರಿಕ ಸಂಯೋಜಕರು ಹಾಗೂ ಐಇಸಿ ಸಂಯೋಜಕರು, ಸಿಬ್ಬಂದಿ ಇದ್ದರು.

300x250 AD
Share This
300x250 AD
300x250 AD
300x250 AD
Back to top