Slide
Slide
Slide
previous arrow
next arrow

ನ. 7ಕ್ಕೆ ತ್ರಿಪುರಾಖ್ಯ ದೀಪೋತ್ಸವ

300x250 AD

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ತ್ರಿಪುರಾಖ್ಯ ದೀಪೋತ್ಸವ ನ.7ರಂದು ಸಂಜೆ 6 ಗಂಟೆಯಿಂದ ನಡೆಯಲಿದ್ದು, ಶಿಷ್ಯರು ಹೆಚ್ಚಿನ ಸಂಖ್ಯೆಯಲ್ಲಿ‌ ಪಾಲ್ಗೊಳ್ಳುವಂತೆ ಮಠಾಧೀಶರಾದ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾಸ್ವಾಮೀಜಿಗಳು ತಿಳಿಸಿದ್ದಾರೆ.
ಶ್ರೀ ಲಕ್ಷ್ಮೀ ನರಸಿಂಹ ದೇವರ ಸನ್ನಿಧಾನದಲ್ಲಿ ಶ್ರೀಗಳ‌ ಸಾನ್ನಿಧ್ಯದಲ್ಲಿ ದೀಪೋತ್ಸವ ನಡೆಯಲಿದೆ‌.
ಅಯುತ 10 ಸಹಸ್ರ ಸಂಖ್ಯೆಯಲ್ಲಿ ತ್ರಿಪುರಾಖ್ಯ ದೀಪೋತ್ಸವ ಜರುಗಲಿದೆ. ಸಂಜೆ 6ರಿಂದ ಶ್ರೀದೇವರ ಮಹಾಮಂಗಳಾರತಿ, ದೀಪೋತ್ಸವ, ಪ್ರಸಾದ ವಿತರಣೆ ನಡೆಯಲಿದೆ. ಮರುದಿನ ನ.8ರಂದು ಗ್ರಹಣ‌ ಇರುವದರಿಂದ ದೀಪೋತ್ಸವ ಒಂದು ದಿನ ಮೊದಲೇ ನಡೆಸಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top