Slide
Slide
Slide
previous arrow
next arrow

ಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ಭಗವದ್ಗೀತಾ ಅಭಿಯಾನ ಉದ್ಘಾಟನೆ

300x250 AD

ಕುಮಟಾ: ಶ್ರೀ ಸರ್ವಜೇಂದ್ರ ಸರಸ್ವತಿ ಪ್ರತಿಷ್ಠಾನ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಿಂದ ನಡೆಸಲಾಗುವ ಭಗವದ್ಗೀತಾ ಅಭಿಯಾನದ ಭಾಗವಾಗಿ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕಾ ಮಟ್ಟದ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

ಕೊಂಕಣ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ಉತ್ತರಕನ್ನಡ ಭಗವದ್ಗೀತಾ ಅಭಿಯಾನ ಸಮಿತಿಯ ಅಧ್ಯಕ್ಷ ಮುರಳಿಧರ ಪ್ರಭು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಗವದ್ಗೀತೆಯನ್ನು ನಾವು ಸರಿಯಾಗಿ ಅರ್ಥೈಸಿ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅದು ಮಂತ್ರದಂತೆ ನಮ್ಮ ಶರೀರವೆಂಬ ಯಂತ್ರವನ್ನು ಸರಿಯಾದ ರೀತಿಯಲ್ಲಿ ನಡೆಸುತ್ತದೆ ಎಂಬುದನ್ನು ತಿಳಿಸಿದರು. ಹಾಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ಹೊನ್ನಾವರ ಭಗವದ್ಗೀತಾ ಅಭಿಯಾನ ಸಮಿತಿಯ ಅಧ್ಯಕ್ಷರಾದ ಜೆ.ಟಿ.ಪೈ ಅವರು ಉಪನ್ಯಾಸಕರಾಗಿ ಆಗಮಿಸಿ, ಗೀತ ಎಂಬುದು ನಮ್ಮ ಬಾಳಿನ ಬೆಳಕು, ಅದು ನಮ್ಮನ್ನು ಸುಸಂಸ್ಕೃತ ಪ್ರಜೆಗಳನ್ನಾಗಿ ಮಾಡುತ್ತದೆ. ನಮ್ಮಲ್ಲಿನ ಕೆಟ್ಟ ಭಾವನೆಗಳನ್ನು ದೂರ ಮಾಡಿ ಉತ್ತಮ ರೀತಿಯಲ್ಲಿ ಜೀವನ ನಡೆಸಲು ಸಹಾಯ ಮಾಡುತ್ತದೆಂಬುದನ್ನು ತಿಳಿಸಿದರು.

ಉತ್ತರ ಕನ್ನಡ ಭಗವದ್ಗೀತಾ ಅಭಿಯಾನ ಸಮಿತಿಯ ಸಂಚಾಲಕ ಆನಂದ ನಾಯ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಕುಮಟಾ ಭಗವದ್ಗೀತಾ ಅಭಿಯಾನ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಸುಧಾ ಶಾನಭಾಗ, ಕಾರ್ಯದರ್ಶಿಗಳಾದ ಗಣೇಶ ಭಟ್ಟ, ಪ್ರಾಂಶುಪಾಲರಾದ ಕಿರಣ ಭಟ್ಟ ಉಪಸ್ಥಿತರಿದ್ದರು.

300x250 AD

ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕರಾದ ಗುರುರಾಜ ಶೆಟ್ಟಿ, ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತಾ ಹೆಗಡೆ, ಪಟ್ಟಣದ ಖ್ಯಾತ ದಂತವೈದ್ಯರಾದ ಸುರೇಶ ಹೆಗಡೆ ಹಾಗೂ ಭಗವದ್ಗೀತಾ ಅಭಿಯಾನ ಸಮಿತಿ ಕುಮಟಾದ ಸದಸ್ಯರುಗಳು, ಸಂಸ್ಥೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಣೇಶ ಭಟ್ಟ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕುಮಟಾ ಭಗವದ್ಗೀತಾ ಅಭಿಯಾನ ಸಮಿತಿಯ ಸಹ ಕಾರ್ಯದರ್ಶಿಯಾದ ಶ್ರೀಮತಿ ಜಯಾ ಶಾನಭಾಗ ಇವರು ವಂದಿಸಿದರು, ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಿರೂಪಿಸಿದರು.

Share This
300x250 AD
300x250 AD
300x250 AD
Back to top