Slide
Slide
Slide
previous arrow
next arrow

ಲಾರಿ ಪಲ್ಟಿ, ಸೇಬು ಚರಂಡಿಗೆ

300x250 AD

ಹೊನ್ನಾವರ: ಪಟ್ಟಣದ ಗೇರುಸೊಪ್ಪಾ ವೃತ್ತದ ಬಳಿ ಲಾರಿ ಪಲ್ಟಿಯಾಗಿದ್ದು, ಲಾರಿಯಲ್ಲಿದ್ದ ಸೇಬು ಹಣ್ಣಿನ ಬಾಕ್ಸ್ ರಸ್ತೆಯ ಪಕ್ಕದ ಚರಂಡಿಗೆ ಬಿದ್ದಿದೆ.
ದೆಹಲಿಯಿಂದ ಸೇಬು ತುಂಬಿಕೊಂಡು ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಟ್ಟಣದ ಗೇರುಸೊಪ್ಪಾ ವೃತ್ತದ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಕಾಲಿಗೆ ಗಾಯವಾಗಿದ್ದು, ಕ್ಲೀನರ್‌ಗೆ ಮುಖಕ್ಕೆ ಹಾಗೂ ದೇಹದ ಇತರೆ ಭಾಗಗಳಿಗೆ ಗಾಯವಾಗಿದೆ.
ಲಾರಿ ಬಿದ್ದ ರಭಸಕ್ಕೆ ಸೇಬು ತುಂಬಿದ ಬಾಕ್ಸ್ ಒಡೆದು ಹೋಗಿ ರಸ್ತೆಯ ಪಕ್ಕಕ್ಕೆ ಬಿದ್ದಿದೆ. ಕ್ರೇನ್ ಮೂಲಕ ಲಾರಿಯನ್ನು ಮೆಲಕ್ಕೆ ಎತ್ತಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸ್ಥಳದಲ್ಲಿ ಪದೇ ಪದೇ ಇಂತಹ ಘಟನೆಗಳು ಸಂಭವಿಸುತ್ತಿದ್ದರು ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿಲ್ಲ. ಅಪಾಯಕಾರಿ ತಿರುವಿನಿಂದ ಕೂಡಿದ್ದರೂ ಸ್ಥಳದಲ್ಲಿ ಸೂಕ್ತ ಬೀದಿದೀಪ ಇಲ್ಲದೇ ರಾತ್ರಿ ಸಮಯದಲ್ಲಿ ವಾಹನ ಸಂಚರಿಸಲು ಪರಿತಪಿಸುವಂತಾಗಿದೆ.

300x250 AD
Share This
300x250 AD
300x250 AD
300x250 AD
Back to top