Slide
Slide
Slide
previous arrow
next arrow

ಸಿಗಂದೂರಿನಲ್ಲಿ ದರ್ಶನಕ್ಕೆ ಮಾತ್ರ ಅವಕಾಶ; ಜೋಗಕ್ಕೆ ನೆಗೆಟಿವ್ ವರದಿ ಕಡ್ಡಾಯ

300x250 AD

ಶಿವಮೊಗ್ಗ: ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಆದೇಶದಂತೆ ಪ್ರಸಿದ್ಧ ಸಿಂಗದೂರು ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವರ ಪೂಜೆ ಪುನಸ್ಕಾರ ಮುಂತಾದ ಎಲ್ಲಾ ಸೇವೆಗಳನ್ನು ನಿಷೇಧಿಸಲಾಗಿದ್ದು ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವೀಕೆಂಡ್ ನಲ್ಲಿ ದರ್ಶನವನ್ನೂ ನಿಷೇಧಿಸಲಾಗಿದೆ.

300x250 AD

ಇನ್ನು ಸುಪ್ರಸಿದ್ಧ ಪ್ರವಾಸಿ ತಾಣ ಜೋಗಫ಼ಾಲ್ಸ್ ಗೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ನೆಗೆಟಿವ್ ವರದಿ ಇಲ್ಲದವರಿಗೆ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

Share This
300x250 AD
300x250 AD
300x250 AD
Back to top