Slide
Slide
Slide
previous arrow
next arrow

ಗುಜರಾತ್‌ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಪಾಕ್‌ ಹಿಂದೂ ನಿರಾಶ್ರಿತರು

300x250 AD

ನವದೆಹಲಿ:  ಕಳೆದ 5 ವರ್ಷಗಳಲ್ಲಿ ಪೌರತ್ವ ಪಡೆದ ಸಾವಿರಾರು ಪಾಕಿಸ್ಥಾನಿ ಹಿಂದೂ ನಿರಾಶ್ರಿತರು ಈ ಬಾರಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಇದು ಗುಜರಾತ್ ಚುನಾವಣಾ ಫಲಿತಾಂಶಗಳ ಮೇಲೆ ಅವರ ಮತಗಳ ಪ್ರಭಾವದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ.

ಮಾಧ್ಯಮ ವರದಿಗಳ ಪ್ರಕಾರ, ಅಹಮದಾಬಾದ್ ಕಲೆಕ್ಟರ್ ಕಚೇರಿಯು 2016 ರಿಂದ ಪಾಕಿಸ್ಥಾನದಿಂದ ಬಂದ 1032 ಹಿಂದೂಗಳಿಗೆ ಭಾರತೀಯ ಪೌರತ್ವವನ್ನು ನೀಡಿದೆ. ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳು ನಿರಂತರ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಓಡಿ ಬಂದು ಆಶ್ರಯ ಪಡೆದಿದ್ದಾರೆ.

ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವ ದಾಖಲೆಗಳನ್ನು ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿ ಕಚೇರಿ ಹೊಂದಿದೆ. ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಒಪ್ಪಿಗೆ ನೀಡಿದರೆ ಮಾತ್ರ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಆಗಸ್ಟ್‌ನಲ್ಲಿ ರಾಜ್ಯ ಗೃಹ ಸಚಿವ ಹರ್ಷ ಸಂಘವಿ ಅವರು ಪಾಕಿಸ್ಥಾನದಿಂದ ಬಂದ 40 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವದ ಪ್ರಮಾಣಪತ್ರಗಳನ್ನು ನೀಡಿದ್ದಾರೆ.

300x250 AD

ನಿರಾಶ್ರಿತರಲ್ಲಿ ಒಬ್ಬರಾದ ದಿಲೀಪ್ ಮಹೇಶ್ವರಿ ಎಂಬುವವರು ಮಾಧ್ಯಮಗಳ ಮುಂದೆ ಮಾತನಾಡಿ, ಭಾರತದಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲು ಮತ್ತು ಗುಜರಾತ್‌ನಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ನನಗೆ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

ಗುಜರಾತಿನ 89 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತ್ತು 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳು ತೀವ್ರ ಸಿದ್ಧತೆ ನಡೆಸಿವೆ.

Share This
300x250 AD
300x250 AD
300x250 AD
Back to top