ಕಾರವಾರ: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2022-23ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳಿಗೆ ಅ.30ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿತ್ತು ಆದರೆ ನಿಗದಿತ ಅವಧಿಯೊಳಗೆ ಅರ್ಜಿಗಳು ಬರದೇ ಇರುವುದರಿಂದ ನವೆಂಬರ್ 30 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ನಮೂನೆಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಸಿದ್ದಾರೆ.