Slide
Slide
Slide
previous arrow
next arrow

ಮಹಿಳೆಯರಿಗಾಗಿ ಹೊಲಿಗೆ ತರಬೇತಿ ನ 7 ರಿಂದ ಆರಂಭ

300x250 AD

ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ 7ರಿಂದ ಡಿ.06ರವರೆಗೆ ಮಹಿಳೆಯರಿಗಾಗಿ 30 ದಿವಸಗಳ ಕಾಲ ಹೊಲಿಗೆ ತರಬೇತಿ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.
ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ- 581 343 ಉತ್ತರಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆhttp://94498 60007, 95382 81989, 99167 83825, 88804 44612, 96209 62004 ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ್ ಸೈಜ್ ಫೋಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್‌ಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top