ಯಲ್ಲಾಪುರ : ಮಾನ್ಯ ಸಚಿವ ಶಿವರಾಮ ಹೆಬ್ಬಾರ್’ರ ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಹಾಗೂ ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಬನವಾಸಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸುಧಾಕರ ನಾಯ್ಕ ಗುಡ್ನಾಪುರ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡ ಸುಧಾಕರ ನಾಯ್ಕ ಗುಡ್ನಾಪುರ ಅವರಿಗೆ ಮಾನ್ಯ ಸಚಿವರಾದ ಶಿವರಾಮ ಹೆಬ್ಬಾರ್ ಪಕ್ಷ ಶಾಲು ಹಾಕಿ ಅತ್ಯಂತ ಆತ್ಮೀಯತೆಯಿಂದ ಪಕ್ಷಕ್ಕೆ ಬರಮಾಡಿಕೊಂಡರು.