ಕಾರವಾರ: ನಮ್ಮ ಭವಿಷ್ಯದ ಬಗ್ಗೆ ದೃಢಸಂಕಲ್ಪ ಹೊಂದಿರಬೇಕು. ನಮಗೆ ಇಷ್ಟವಾದ ಕಾರ್ಯಕ್ಷೇತ್ರದಲ್ಲಿ ಕಷ್ಟಪಟ್ಟು ದುಡಿಯಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಉಪಸಂಪಾದಕಿ ಪ್ರೀತಿ ವಿ.ಕಾಮತ್ ನುಡಿದರು.
ನಗರದ ಹಿಂದೂ ಪ್ರೌಢಶಾಲೆಯ 125ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ಕರಿಯರ್ಸ್ & ಯು’ ವಿಚಾರಗೋಷ್ಠಿಯಲ್ಲಿ ತಾವು ಕಾರ್ಯನಿರ್ವಹಿಸುತ್ತಿರುವ ಮಾದ್ಯಮ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬೇಕಿದ್ದಲ್ಲಿ ಯಾವ ರೀತಿಯ ಶಿಕ್ಷಣವನ್ನು ಪಡೆಯಬೇಕು ಎಂಬುವುದರ ಕುರಿತು ವಿರವಾದ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಸ್ವಾಗತ ಕೋರಿದರು. ಕಾರವಾರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಅನಿರುದ್ಧ ಹಳದಿಪುರಕರ ಮಾತನಾಡಿದರು. ಹಿಂದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅರುಣ ರಾಣೆ ವಂದನಾರ್ಪಣೆ ಸಲ್ಲಿಸಿದರು ಹಾಗೂ ಸುಮತಿ ದಾಮ್ಲೆ ಪ್ರೌಢಶಾಲೆಯ ಪ್ರಭಾರ ಮುಖ್ಯಾಧ್ಯಾಪಕ ಸಂತೋಷ ಶೇಟ್ ಕಾರ್ಯಕ್ರಮ ನಿರ್ವಹಿಸಿದರು.
ಈ ಕಾರ್ಯಕ್ರಮದಲ್ಲಿ ಮೂರೂ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದರು.