• Slide
    Slide
    Slide
    previous arrow
    next arrow
  • ನಾಳೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟವಿಲ್ಲ; ಪರೀಕ್ಷಾ ಮಂಡಳಿ ಸ್ಪಷ್ಟನೆ

    300x250 AD

    ಬೆಂಗಳೂರು: ಜುಲೈನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂಬುದಾಗಿ ಹೇಳಲಾಗುತ್ತಿದ್ದು, ಆ.7 ಅಂದರೆ ನಾಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗೋದಿಲ್ಲ ಎಂದು ಪರೀಕ್ಷಾ ಮಂಡಳಿ ಸ್ಪಷ್ಟ ಪಡಿಸಿದೆ.
    ಈ ಕುರಿತಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿಯ ನಿರ್ದೇಶಕಿ ಸುಮಂಗಲಾ ಮಾಹಿತಿ ನೀಡಿದ್ದು, ನಾಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವಂತ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಆ ಕುರಿತಂತೆ ಸದ್ಯದಲ್ಲೇ ಮಾಹಿತಿಯನ್ನು ನೀಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ನಾಳೆ ಪ್ರಕಟಗೊಳ್ಳಲಿದೆ ಎಂಬುದಾಗಿ ಹೇಳಲಾಗುತ್ತಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ಮುಂದೂಡಿಕೆಯಾದಂತೆ ಆಗಿದೆ ಎಂದು ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top