Slide
Slide
Slide
previous arrow
next arrow

ನ.9ಕ್ಕೆ ಸಚಿವ ಹೆಬ್ಬಾರ್’ರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

300x250 AD

ಯಲ್ಲಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರವಾರ ಹಾಗೂ ಆಕುಕ ಇಂಜಿನಿಯರಿಂಗ್ ಘಟಕ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭವನ್ನು ನ. 9 ಬುಧವಾರ ಬೆಳಿಗ್ಗೆ 10ಗಂಟೆಗೆ ಆಯೋಜಿಸಲಾಗಿದೆ.

ಶಿಲಾನ್ಯಾಸಕರಾಗಿ ಕಾರ್ಮಿಕ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಆಗಮಿಸಲಿದ್ದು ತಾಲೂಕ ಆಸ್ಪತ್ರೆ ಆವರಣದಲ್ಲಿ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಟ್ಯಾಂಕ್, ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ನಿರ್ಮಾಣ ಕಾಮಗಾರಿ ಹಾಗೂ ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ವಸತಿ ಗೃಹಗಳ ದುರಸ್ತಿ ಮತ್ತು ನವೀಕರಣ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top