ಯಲ್ಲಾಪುರ: ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಕೋಳಿಕೇರಿ ಅಂಗನವಾಡಿ ಕೇಂದ್ರದ ಸಭಾಂಗಣದಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ ಅಭಿಯಾನ ನಮಗೂ ಹಕ್ಕಿದೆ @ 75 ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಜಿಬಿ ಹಳ್ಳಾಕಾಯಿ, ಕಾನೂನು ಸೇವೆಗಳ ಪ್ರಾಧಿಕಾರಗಳು ಜನಸಾಮಾನ್ಯರ ಕಾನೂನು ಹಕ್ಕುಗಳ ಸಂರಕ್ಷಣೆಗೆ ಬದ್ಧವಾಗಿದೆ, ಜನಸಾಮಾನ್ಯರಿಗೆ ಕಾನೂನು ಬಗ್ಗೆ ಅರಿವು ನೀಡಲಾಗಿದೆ ಎಂದು ಹೇಳಿದರು.
ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ್ ಮಾತನಾಡಿ, ಸಾರ್ವಜನಿಕರು ತಮ್ಮ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣ ತಕ್ಷಣ ಪರಿಹಾರ ಕಂಡುಕೊಳ್ಳಲು ಲೋಕ ಅದಾಲತ್ ಒಂದು ಸುಲಭವಾದ ಅವಕಾಶವಾಗಿರುತ್ತದೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.
ಪ್ಯಾನಲ್ ವಕೀಲರಾದ ಸರಸ್ವತಿ ಭಟ್ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ಯಾರಾಲೀಗಲ್ ವಾಲಂಟೀಯರ್ಸ್ ಸುಧಾಕರ ನಾಯಕ ನಿರೂಪಿಸಿದರು. ಶಿಕ್ಷಕಿ ಶಿವಲೀಲಾ ಹುಣಸಗಿ ಸ್ವಾಗತಿಸಿದರು. ಲಕ್ಷ್ಮೀ ಸಿದ್ದಿ ವಂದಿಸಿದರು. ಗ್ರಾಮದ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾನೂನು ಸೇವೆಗಳ ಪ್ರಾಧಿಕಾರಗಳು ಜನಸಾಮಾನ್ಯರ ಕಾನೂನು ಹಕ್ಕುಗಳ ಸಂರಕ್ಷಣೆಗೆ ಬದ್ಧ: ಜಿ.ಬಿ.ಹಳ್ಳಾಕಾಯಿ
